ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಲಾಯಿತು. ಪೂಜಾ ಸಜೇಶ್, ಕಮಲಮ್ಮ, ಕಮರುನ್ನಿಸ ಇತರರು ಇದ್ದರು.
ವಿರಾಜಪೇಟೆ: ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವತಿಯಿಂದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೋಮವಾರ ನೋಟ್‌ಬುಕ್ ವಿತರಿಸಲಾಯಿತು.
ಅಕಾಡೆಮಿ ಮುಖ್ಯಸ್ಥೆ ಪೂಜಾ ಸಜೇಶ್ ನೋಟ್‌ಬುಕ್ ವಿತರಿಸಿ ಮಾತನಾಡಿ, ಪ್ರತಿ ತಿಂಗಳು ಎಲ್‌ಎಸ್‌ಎ ಕೇರ್ ಮೂಲಕ ತಿಂಗಳಿಗೊಂದು ವೈವಿಧ್ಯಮಯ ಸಮಾಜಮುಖಿ ಕಾರ್ಯಕ್ರಮವನ್ನು ಆಯೋಜಿಸುವ ಉದ್ದೇಶವನ್ನು ಸಂಸ್ಥೆಯು ಹೊಂದಿದೆ. ಈ ಹಿಂದೆಯೂ ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆ ಹಾಗೂ ಇತರೆಡೆ ಸಾಮಾಜಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದನ್ನು ಮುಂದುವರೆಸಿಕೊಂಡು ಹೋಗಲಾಗುವುದು. ಸೌಲಭ್ಯ ಪಡೆದು ಗ್ರಾಮೀಣ ವಿದ್ಯಾರ್ಥಿಗಳು ಮತ್ತಷ್ಟು ಶೈಕ್ಷಣಿಕ ಸಾಧನೆಗಳನ್ನು ಮಾಡುವಂತಾಗಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಹಾಗೂ ಕಲ್ತೋಡು ಸಿಆರ್‌ಪಿ ಸೈಫುನ್ನಿಸ, ಹೆಗ್ಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕಮಲಮ್ಮ, ಸಹ ಶಿಕ್ಷಕಿ ಕಮರುನ್ನಿಸ, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಇದ್ದರು.