ಉತ್ತಮ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಅವಶ್ಯ

ಸೋಮವಾರಪೇಟೆ ತಾಲೂಕಿನ ಯಡವನಾಡು ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗಿರಿಜನರ ಅರೋಗ್ಯ ತಪಾಸಣೆ ಶಿಬಿರದಲ್ಲಿ ವೈದ್ಯರು ಅರೋಗ್ಯ ತಪಾಸಣೆ ನಡೆಸಿದರು.
ಸೋಮವಾರಪೇಟೆ ತಾಲೂಕಿನ ಯಡವನಾಡು ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗಿರಿಜನರ ಅರೋಗ್ಯ ತಪಾಸಣೆ ಶಿಬಿರದಲ್ಲಿ ವೈದ್ಯರು ಅರೋಗ್ಯ ತಪಾಸಣೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಎಸಿಎಫ್ ಗೋಪಾಲ್ ಅಭಿಪ್ರಾಯ
  • ಗಿರಿಜನರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ
ಸೋಮವಾರಪೇಟೆ: ತಾಲೂಕಿನ ಯಡವನಾಡು ಸಮುದಾಯ ಭವನದಲ್ಲಿ ಅರಣ್ಯ ಇಲಾಖೆಯ ಉಪ ವಿಭಾಗದಿಂದ ಗಿರಿಜನರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ ಇತ್ತೀಚೆಗೆ ಆಯೋಜಿಸಲಾಗಿತ್ತು.
ಶಿಬಿರ ಉದ್ಘಾಟಿಸಿ ಮಾತನಾಡಿದ ಎಸಿಎಫ್ ಗೋಪಾಲ್, ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ ಹಾಗೂ ಶುದ್ಧ ಕುಡಿಯುವ ನೀರು ಅತ್ಯಂತ ಅಗತ್ಯವೆಂದು ತಿಳಿಸಿದರು. ಪೌಷ್ಟಿಕಾಂಶ ಹೊಂದಿರುವ ಆಹಾರ ಸೇವನೆಯಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಅನೇಕ ರೋಗಗಳಿಂದ ದೂರ ಇರಲು ಸಹಾಯವಾಗುತ್ತದೆ. ವಿಶೇಷವಾಗಿ ಮಕ್ಕಳ ಹಾಗೂ ಗರ್ಭಿಣಿಯರ ಆರೋಗ್ಯ ಕಾಪಾಡಲು ಸಮತೋಲನ ಆಹಾರ ಮುಖ್ಯವೆಂದರು. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಆರೋಗ್ಯದ ಬಗ್ಗೆ ಜಾಗೃತಿ ಹೊಂದಬೇಕು ಎಂದರು.
ಗಿರಿಜನರ ಗಂಧದ ಹಾಡಿ, ಸಜ್ಜಳಿ ಹಾಡಿ, ಸುಳೆಬಾವಿ ಹಾಡಿ, ಕೂಪ್ ಹಾಡಿ, ಹುಣಸೆಪಾರೇ ಹಾಡಿಗಳ ಗಿರಿಜನರು ಮತ್ತು ಮಕ್ಕಳು, ಸಾರ್ವಜನಿಕರು ಅರೋಗ್ಯ ತಪಾಸಣೆ ಮಾಡಿಸಿಕೊಂಡರು. 40 ಮಕ್ಕಳು, 70 ಹಾಡಿ ನಿವಾಸಿಗಳು ಮತ್ತು 20 ಸಿಬ್ಬಂದಿ ಶಿಬಿರದ ಸೌಲಭ್ಯ ಪಡೆದುಕೊಂಡರು.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ತಪಾಸಣೆ ನಡೆಸಿದರು. ಆರ್‌ಎಫ್‌ಒ ಶೈಲೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net