ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಿ

ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕ ದಿನೇಶ್‌ಕುಮಾರ್ ಅವರು ಸಂಚಾರ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕ ದಿನೇಶ್‌ಕುಮಾರ್ ಅವರು ಸಂಚಾರ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
Published on
ಸುಂಟಿಕೊಪ್ಪ: ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಜೀವ ಕಳೆದುಕೊಳ್ಳುತ್ತಿರುವ ಪರಿಸ್ಥಿತಿ ಎದುರಾಗುತ್ತಿರುವುದು ಶೋಚನೀಯ ವಿಚಾರ ಎಂದು ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕ ದಿನೇಶ್‌ಕುಮಾರ್ ವಿಷಾದಿಸಿದ್ದಾರೆ.
ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ವಿದ್ಯಾರ್ಥಿಗಳೊಂದಿಗೆ ಹೆಲ್ಮೆಟ್ ಧರಿಸಿ ಜೀವ ಉಳಿಸಿ ವಿಷಯದ ಮೇಲೆ ಪ್ರಾತ್ಯಕ್ಷಿಕೆ ಸಹಿತ ಸಂವಾದ ನಡೆಸಿದ ಅವರು, ದ್ವಿಚಕ್ರ ವಾಹನಗಳಲ್ಲಿ ಹೆಲ್ಮೆಟ್ ಧರಿಸದಿದ್ದರೆ ಜೀವಕ್ಕೆ ಅಪಾಯ. ಅದೇ ರೀತಿ ಕಾರು ಮತ್ತು ಇತರ ದೊಡ್ಡ ವಾಹನಗಳಲ್ಲಿ ಸೀಟ್‌ಬೆಲ್ಟ್ ಧರಿಸದಿದ್ದರೆ ಅಪಘಾತಗಳು ಸಂಭವಿಸಿದಾಗ ಆಗುವ ಮರಣಾಂತಿಕ ಗಾಯಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಮಕ್ಕಳು ಸಂಚಾರ ನಿಯಮಗಳನ್ನು ಪಾಲಿಸಬೇಕು, ವಾಹನ ಚಾಲನೆಯ ಸಂದರ್ಭದಲ್ಲಿ ಅಗತ್ಯ ದಾಖಲಾತಿಗಳು ಹೊಂದಿದ್ದರೆ ದಂಡ ಮತ್ತು ಇತರ ಕಾನೂನು ಕ್ರಮಗಳಿಂದ ಪಾರಾಗಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್‌ರಾಜ್, ಸಿಬ್ಬಂದಿ ಹಾಗೂ ಕಾಲೇಜು ಉಪನ್ಯಾಸಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net