ಇಲ್ಲಿನ ಕೈಗಾರಿಕಾ ಬಡಾವಣೆಯಲ್ಲಿರುವ ಕಾಫಿ ಮತ್ತು ಇತರ ಉತ್ಪಾದಕಾ ಘಟಕಗಳ ಮುಖ್ಯಸ್ಥರು ತಮ್ಮೊಂದಿಗೆ ಕೈಜೋಡಿಸಿದ್ದಾರೆ. ಅಂದು ಸಂಜೆ 4 ಗಂಟೆಗೆ ಬಸವೇಶ್ವರ ಬಡಾವಣೆಯ ಬಯಲು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕವಾಗಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಸ್ತಾಂತರ ಪ್ರಕ್ರಿಯೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಮಿತಿ ಅಧ್ಯಕ್ಷ ಬಿ.ಕೆ. ಸುದೀಪ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಡಿಕೇರಿ ಶಾಸಕ ಮಂತರ್‌ಗೌಡ, ಕುಶಾಲನಗರ ವೃತ್ತ ನಿರೀಕ್ಷಕ ಬಿ.ಎಸ್.ದಿನೇಶ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಉದ್ಯಮಿಗಳಾದ ಎನ್.ಸಾತಪ್ಪನ್, ಎನ್.ವಿಶ್ವನಾಥನ್ ಮತ್ತು ಈಶ್ವರನ್ ಜವಾಹರ್ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಪೌರಕಾರ್ಮಿಕರಾದ ಸತೀಶ್ ಮತ್ತು ರಾಜೇಶ್ವರಿ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.