ಸಮುದಾಯ ಸಂಘಟನೆಗೆ ಕ್ರೀಡಾಕೂಟ ಪ್ರೇರಕ

ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಅಭಿಮತ
inaguration
ಶನಿವಾರಸಂತೆಯ ಭಾರತಿ ವಿದ್ಯಾ ಸಂಸ್ಥೆ ಮೈದಾನದಲ್ಲಿ ಕೆಂಪೇಗೌಡ ಒಕ್ಕಲಿಗರ ಸಂಘ ಸೋಮವಾರ ಹಮ್ಮಿಕೊಂಡಿದ್ದ ಕ್ರೀಡಾಕೂಟವನ್ನು ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಉದ್ಘಾಟಿಸಿದರು. ಕೇಶವಮೂರ್ತಿ, ಬೆಕ್ಕನಹಳ್ಳಿ ನಾಗರಾಜ್, ಕೃಷ್ಣೇಗೌಡ ಇತರರು ಇದ್ದರು. sports
Published on: 

ಶನಿವಾರಸಂತೆ : ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಒಕ್ಕಲಿಗರ ಕ್ರೀಡಾಕೂಟ ಸ್ಥಳೀಯ ಭಾರತಿ ವಿದ್ಯಾ ಸಂಸ್ಥೆ ಮೈದಾನದಲ್ಲಿ ಸೋಮವಾರ ನೆರವೇರಿತು. ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಕೂಟ ಉದ್ಘಾಟಿಸಿ ಮಾತನಾಡಿ, ಸಮುದಾಯದವರನ್ನು ಒಗ್ಗೂಡಿಸಲು ಮತ್ತು ಸಂಘಟನೆಯಲ್ಲಿ ಕ್ರಿಯಾಶೀಲರನ್ನಾಗಿ ಮಾಡಲು ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದರು. ಕೆಂಪೇಗೌಡ ಒಕ್ಕಲಿಗರ ಸಂಘವು ಅನೇಕ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಸಂಘವು ಹೆಮ್ಮರವಾಗಿ ಬೆಳೆದು ಸಮಾಜಕ್ಕೆ ಮಾರ್ಗದರ್ಶಿಯಾಗಲಿ ಎಂದರು.

ಒಗ್ಗಟ್ಟು ಕಡಿಮೆಯಾಗಿದೆ: ಕರ್ನಾಟಕ ರಾಜ್ಯ ಬೆಳೆಗಾರರ ಒಕ್ಕೂಟದ ಉಪಾಧ್ಯಕ್ಷ ಬೆಕ್ಕನಹಳ್ಳಿ ನಾಗರಾಜ್ ಮಾತನಾಡಿ, ಸಮುದಾಯ ದವರಲ್ಲಿ ಒಗ್ಗಟ್ಟು ಕಡಿಮೆಯಾಗಿದೆ. ಕ್ರೀಡಾಕೂಟಗಳ ಮೂಲಕ ಸಂಘಟನೆ ಆಗಬೇಕಿದೆ ಎಂದರು. ದ್ವೇಷ ರಾಜಕಾರಣ ಎಂದಿಗೂ ಮಾಡಬಾರದು ಎಂದರು. ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ಕೇಶವಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘ ಹೆಮ್ಮರವಾಗಿ ಬೆಳೆಯಲು ಸಹಕಾರಿಯಾಗುವ ಹಲವು ಯೋಜನೆ ರೂಪಿಸಲಾಗಿದೆ. ಸ್ವಂತ ಕಟ್ಟಡ ನಿರ್ಮಾಣ ಮಾಡುವ ಉದ್ದೇಶವೂ ಇದೆ. ಸಮುದಾಯದ ಸರ್ವರೂ ಅಗತ್ಯ ಸಹಕಾರಗಳನ್ನು ನೀಡಬೇಕು ಎಂದರು. ಕ್ರೀಡಾಕೂಟವು ಮುಂಬರುವ ಎಲ್ಲ ಚಟುವಟಿಕೆಗಳಿಗೆ ಉತ್ತೇಜನ ನೀಡಲಿ ಎಂದರು.

ಸಮುದಾಯದವರಿಗೆ ವಿವಿಧ ಸ್ಪರ್ಧೆಗಳು ನೆರವೇರಿದವು. ಹಿರಿಯರಾದ ಕಳಲೆ ಕೃಷ್ಣೇಗೌಡ, ನಿವೃತ್ತ ಶಿಕ್ಷಕ ಗುಂಡೇಗೌಡ, ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net