9ರಂದು ಆಟಿಡೊಂಜಿ ದಿನ, ರಕ್ತದಾನ ಶಿಬಿರ

 ರಕ್ತದಾನ
ರಕ್ತದಾನ
Published on

ನಾಪೋಕ್ಲು:

ಇಲ್ಲಿನ ಬಿಲ್ಲವ ಸಮಾಜದ ವತಿಯಿಂದ ಆ.9ರಂದು ಆಟಿಡೊಂಜಿ ದಿನ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಕೊಡವ ಸಮಾಜದಲ್ಲಿ ಆಯೋಜಿಸಲಾಗಿದೆ ಎಂದು ನಾಪೋಕ್ಲು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ.ಪ್ರತೀಪ ಹೇಳಿದರು.

ಅಂದು ಬೆಳಗ್ಗೆ 10 ಗಂಟೆಗೆ ಕೊಡವ ಸಮಾಜದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಿದ್ದು, ಸುಮಾರು 100 ಯೂನಿಟ್ ರಕ್ತ ಸಂಗ್ರಹಿಸುವ ಗುರಿ ಹೊಂದಿದ್ದೇವೆ. ಸಾರ್ವಜನಿಕರು ಸಹಕಾರ ನೀಡುವುದರೊಂದಿಗೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಬೆಳಗ್ಗೆ 11 ಗಂಟೆಗೆ ನಾಪೋಕ್ಲು ಭಾಗಮಂಡಲ ಮುಖ್ಯ ರಸ್ತೆಯಲ್ಲಿ ಬಿಲ್ಲವ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಲಾಗುವುದು. ಬೆಳಗ್ಗೆ 11.30 ಗಂಟೆಗೆ ಕೊಡವ ಸಮಾಜದಲ್ಲಿ ಆಟಿಡೊಂಜಿ ದಿನ ಸಭಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಾಧಕರಿಗೆ ಸನ್ಮಾನ ಹಾಗೂ ಮನೆಯಲ್ಲಿ ಮಾಡಿದ ಆಟಿ ಮಾಸದ ಸಾಂಪ್ರದಾಯಿಕ ತಿನಿಸುಗಳ ಪ್ರದರ್ಶನ ಆಯೋಜಿಸಲಾಗಿದೆ. ಸಮುದಾಯದವರಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಮನರಂಜನಾ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ರಾಮನಗರದ ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಧಾನಸಭಾ ಉಪ ಸಭಾಪತಿ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಸಭಾಪತಿ ಕೆ.ಜಿ.ಬೋಪಯ್ಯ, ಬಿಲ್ಲವ ಸಮಾಜ ಒಕ್ಕೂಟದ ಜಿಲ್ಲಾಧ್ಯಕ್ಷ ಲಿಂಗಪ್ಪ, ವಿರಾಜಪೇಟೆ ವೃತ್ತದ ಡಿವೈಎಸ್‌ಪಿ ಮಹೇಶ್ ಕುಮಾರ್, ಮಡಿಕೇರಿ ರಕ್ತ ನಿಧಿ ಅಧಿಕಾರಿ ಕರಂಬಯ್ಯ, ನಿವೃತ್ತ ವೈದ್ಯಾಧಿಕಾರಿ ಡಾ.ಎಚ್.ವಿ.ದೇವದಾಸ್, ಮಡಿಕೇರಿ ಬಿಲ್ಲವ ಸಮಾಜದ ಅಧ್ಯಕ್ಷೆ ಲೀಲಾವತಿ, ಉದ್ಯಮಿ ವೆಂಕಪ್ಪ ಪೂಜಾರಿ, ಕಾಂಗ್ರೆಸ್ ಮುಖಂಡ ರವೀಂದ್ರ, ಸಮಾಜ ಸೇವಕ ಎಡಿಕೇರಿ ಪ್ರಸನ್ನ ಮತ್ತಿತರರು ಪಾಲ್ಗೊಳ್ಳುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಲ್ಲವ ಸಮಾಜದ ಉಪಾಧ್ಯಕ್ಷ ಬಿ.ಆರ್.ವಸಂತ , ಕಾರ್ಯದರ್ಶಿ ಕೆ.ಎಸ್.ಲೋಹಿತ್, ಸಂಘಟನಾ ಕಾರ್ಯದರ್ಶಿ ಬಿ.ಎಸ್.ನಾಗರಾಜ್, ಕ್ರೀಡಾ ಕಾರ್ಯದರ್ಶಿ ಬಿ.ಎಸ್.ದಿಲೀಪ್, ಸದಸ್ಯರಾದ ಬಿ.ಪಿ.ಪುನೀತ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net