ಬೆಳಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಸೋಲೂರು ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕೇರಳ ಕಾಞಂಗಾಡು ಗೃಹಸ್ಥಾಶ್ರಮದ ಗಂಗಾಜೀ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಶಾಸಕರಾದ ಡಾ.ಮಂತರ್‌ಗೌಡ, ಎ.ಎಸ್.ಪೊನ್ನಣ್ಣ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಎಂಎಲ್‌ಸಿ ಸುಜಾ ಕುಶಾಲಪ್ಪ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಬಿ.ಎ.ಜೀವಿಜಯ, ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ಸಮಿತಿ ಸದಸ್ಯ ಹರಪಳ್ಳಿ ರವೀಂದ್ರ, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಶಶಿಕುಮಾರ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಗಂಟೆಗೆ ನೃತ್ಯ ಸ್ಪರ್ಧೆ, ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.