ಅಪೌಷ್ಟಿಕತೆಯು ಭಾರತ ಎದುರಿಸುತ್ತಿರುವ ಪ್ರಮುಖ ಸಾರ್ವಜನಿಕ ಆರೋಗ್ಯ ಸವಾಲುಗಳಲ್ಲಿ ಒಂದಾಗಿದೆ. ಇದು ಮಹಿಳೆಯರು ಮತ್ತು ಮಕ್ಕಳ ಆರೋಗ್ಯ, ಬೆಳವಣಿಗೆ, ಕಲಿಕೆ ಹಾಗೂ ಉತ್ಪಾದಕತೆ ಮೇಲೆ ಪರಿಣಾಮ ಬೀರುತ್ತದೆ. ಈ ಸವಾಲಿಗೆ ಸ್ಪಂದಿಸಲು ಭಾರತ ಸರ್ಕಾರ ಮಾರ್ಚ್ ೨೦೧೮ರಲ್ಲಿ ಪೋಷಣ್ ಅಭಿಯಾನ ಪ್ರಾರಂಭಿಸಿದೆ. ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಪೋಷಣ್ ಮಾಸಾಚರಣೆ ಆಚರಿಸಲಾಗುತ್ತಿದ್ದು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು, ಕಿಶೋರಿಯರಲ್ಲಿ ಪೋಷಣೆ, ಆರೋಗ್ಯ ಮತ್ತು ಆರೈಕೆಗೆ ಸಂಬಂಧಿಸಿದ ನಡವಳಿಕೆಗಳನ್ನು ಉತ್ತೇಜಿಸುವುದು ಇದರ ಉದ್ದೇಶ ಎಂದು ತಿಳಿಸಿದರು.