ಇದೇ ಸಂದರ್ಭದಲ್ಲಿ ಶಿಬಿರಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಹಾಕಿ, ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ತರಬೇತುದಾರರಾದ ಬೊಪ್ಪಂಡ ಶಾಂ ಪೂಣಚ್ಚ, ಕುಡೆಕಲ್ ಸಂತೋಷ್, ನಾಟೋಳಂಡ ಸೊಮಯ್ಯ, ಕರವಂಡ ಕಿರಣ್, ಲೋಕೇಶ್ ನಾಯ್ಡು, ಬಿ.ಎಸ್. ತಿಲಕ್, ಕಾವ್ಯ ಸೋಮಯ್ಯ, ಜನ್ಯ ಅವರುಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.