ಸೆ.೮ ರೊಳಗೆ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಿ

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಎಸ್.ಜೆ.ಸೋಮಶೇಖರ್ ಮಾತನಾಡಿದರು. ಚಿನ್ನಸ್ವಾಮಿ, ಮಹೇಶ್, ಗಣಪತಿ, ಬಿ.ರಾಘವ ಇದ್ದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಎಸ್.ಜೆ.ಸೋಮಶೇಖರ್ ಮಾತನಾಡಿದರು. ಚಿನ್ನಸ್ವಾಮಿ, ಮಹೇಶ್, ಗಣಪತಿ, ಬಿ.ರಾಘವ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸೆ.೮ ರೊಳಗೆ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಿ

ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ೧೫೭ನೇ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದು, ಸೆ.೮ ರೊಳಗೆ ಆಯಾಯ ಶಾಲಾ-ಕಾಲೇಜು ಹಂತದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸೆ.೮ ರಂದು ಆಯಾಯ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ-ಸ್ನಾತಕೋತ್ತರ ಪದವಿ ಮಟ್ಟದಲ್ಲಿ ಪ್ರಬಂಧ ಬರೆಸಿ ಪ್ರಬಂಧವನ್ನು ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರ ಮೂಲಕ ಕಳುಹಿಸಬೇಕು. ತಜ್ಞರ ಸಮಿತಿಯು ಸೆ.೧೦ ರಂದು ಮೂರು ವಿಭಾಗದಲ್ಲಿ(ಪ್ರೌಢಶಾಲೆ, ಪದವಿ ಪೂರ್ವ, ಪದವಿ-ಸ್ನಾತಕೋತ್ತರ ಪದವಿ) ಆಯಾಯ ಹಂತದಲ್ಲಿ ಮೌಲ್ಯಮಾಪನ ಮಾಡಲಿದೆ. ಈ ಸಂಬಂಧ ಅಗತ್ಯ ಕ್ರಮವಹಿಸುವಂತೆ ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಮಾಹಿತಿ ನೀಡಿ, ಮಹಾತ್ಮ ಗಾಂಧೀಜಿ ಅವರ ೧೫೭ನೇ ಜಯಂತಿಯನ್ನು ಅ.೨ ರಂದು ಆಚರಿಸಲಾಗುತ್ತಿದ್ದು, ಈ ಸಂಬಂಧ ವಿದ್ಯಾರ್ಥಿಗಳಲ್ಲಿ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಭಾಳ್ವೆ, ಅಸ್ಪಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ, ಪದವಿ-ಸ್ನಾತಕೋತ್ತರ ಪದವಿಯ ಹಂತದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಮಟ್ಟದಲ್ಲಿ ನಡೆಯುವ ಮೂರು ವಿಭಾಗದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರತ್ಯೇಕವಾಗಿ ಪ್ರಥಮ ೩ ಸಾವಿರ ರೂ, ದ್ವಿತೀಯ ೨ ಸಾವಿರ ರೂ. ಮತ್ತು ತೃತೀಯ ೧ ಸಾವಿರ ರೂ. ನಗದು ಬಹುಮಾನ ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಮೂರು ವಿಭಾಗದಲ್ಲಿ ಆಯ್ಕೆಯಾದ ಪ್ರಥಮ ಬಹುಮಾನಿತರ ಮೂರು ಪ್ರಬಂಧವನ್ನು ರಾಜ್ಯ ಮಟ್ಟಕ್ಕೆ ಕಳುಹಿಸಿಕೊಡಲಾಗುವುದು. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ ರೂ.೩೧ ಸಾವಿರ, ದ್ವಿತೀಯ ಸ್ಥಾನಕ್ಕೆ ೨೧ ಸಾವಿರ ರೂ. ಮತ್ತು ತೃತೀಯ ಸ್ಥಾನಕ್ಕೆ ೧೧ ಸಾವಿರ ರೂ. ಬಹುಮಾನ ನೀಡಲಾಗುತ್ತದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಹೇಳಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಹೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಣಪತಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇ.ಪ್ರೊ. ಬಿ.ರಾಘವ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net