

ಸಿದ್ದಾಪುರದಲ್ಲಿ ಒಂದು ಆನೆ, ಚೆಂಬೆಳ್ಳೂರಿನಲ್ಲಿ ಒಂದು ಆನೆ ಸೇರಿದಂತೆ ಇತ್ತೀಚಿನ ದಿನಗಳಲ್ಲಿ ಮೂರು ಆನೆಗಳನ್ನು ಸೆರೆಹಿಡಿಯಲಾಗಿದೆ. ಇದೇ ರೀತಿಯಲ್ಲಿ ತೊಂದರೆ ಕೊಡುವ ಆನೆಗಳನ್ನು ಗುರುತಿಸಿ ಹಿಡಿಯುವ ಕೆಲಸ ಮಾಡಲಾಗುತ್ತಿದೆ. ಆನೆಗಳನ್ನು ಹಿಡಿದ ಕೂಡಲೇ ಪರಿಸರವಾದಿಗಳು, ಎನ್‌ಜಿಒಗಳು ಇವರು ಆನೆಗಳನ್ನು ಹಿಡಿದುಬಿಟ್ಟರು ಎಂದು ಸುಪ್ರೀಂಕೋರ್ಟ್ನಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇವೆಲ್ಲವುಗಳ ನಡುವೆ ಸಮತೋಲನ ಕಾಯ್ದುಕೊಂಡು ಆನೆ-ಮಾನವ ಸಂಘರ್ಷ ಪರಿಹಾರಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. .
ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸ್ಥಳದ ಸೂಕ್ತತೆಯಂತೆ ಹಾಗೂ ಅನುದಾನದ ಲಭ್ಯತೆಗೆ ಅನುಗುಣವಾಗಿ ಸೌರಶಕ್ತಿ ಬೇಲಿ, ಆನೆತಡೆ ಕಂದಕ ನಿರ್ಮಾಣ ಮಾಡಲಾಗಿದ್ದು, ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಮಾನವ-ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ಉಪಯೋಗಿಸಿದ ರೈಲ್ವೆ ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೆ ಬ್ಯಾರಿಕೇಡ್ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, 428 ಕಿಮೀ ರೈಲ್ವೇ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಈಶ್ವರ ಬಿ. ಖಂಡ್ರೆ, ಅರಣ್ಯ ಜೀವಿಶಾಸ್ತç ಮತ್ತು ಪರಿಸರ ಖಾತೆ ಸಚಿವ