ಕಾವೇರಿ ನದಿಗೆ ಶೌಚಗೃಹದ ನೀರು ಹರಿಸುವುದಕ್ಕೆ ಆಕ್ರೋಶ

ಕುಶಾಲನಗರದ ಹಲವು ಭಾಗಗಳಿಂದ ಚರಂಡಿ ಮೂಲಕ ತ್ಯಾಜ್ಯ ನೀರು ಕಾವೇರಿ ನದಿ ಸೇರುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಜತೆ ಚರ್ಚೆ ನಡೆಸಿದರು. ಗಿರೀಶ್, ಉದಯ್, ಕೆ.ಎಸ್. ನಾಗೇಶ್, ನಟೇಶ್ ಗೌಡ ಮತ್ತಿತರರು ಇದ್ದರು.
ಕುಶಾಲನಗರದ ಹಲವು ಭಾಗಗಳಿಂದ ಚರಂಡಿ ಮೂಲಕ ತ್ಯಾಜ್ಯ ನೀರು ಕಾವೇರಿ ನದಿ ಸೇರುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಜತೆ ಚರ್ಚೆ ನಡೆಸಿದರು. ಗಿರೀಶ್, ಉದಯ್, ಕೆ.ಎಸ್. ನಾಗೇಶ್, ನಟೇಶ್ ಗೌಡ ಮತ್ತಿತರರು ಇದ್ದರು.
Published on
ಕುಶಾಲನಗರ:
ಕುಶಾಲನಗರದ ಹಲವು ಭಾಗಗಳಿಂದ ಚರಂಡಿ ಮೂಲಕ ತ್ಯಾಜ್ಯ ನೀರು ಕಾವೇರಿ ನದಿ ಸೇರುತ್ತಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು. ಮಂಗಳವಾರ ರಾತ್ರಿ ಗಣಪತಿ ದೇವಸ್ಥಾನದ ಬಳಿ ಯಾರೋ ಚರಂಡಿಗೆ ಶೌಚಗೃಹದ ನೀರು ಬಿಟ್ಟ ಕಾರಣ ದುರ್ವಾಸನೆ ಆವರಿಸಿತ್ತು. ಇದೇ ವಿಚಾರವನ್ನು ಸ್ಥಳೀಯ ವಾಟ್ಸ್ ಆಪ್ ಗ್ರೂಪ್ ಗಳಲ್ಲಿ ಚರ್ಚೆ ಮಾಡಿ ಬುಧವಾರ ಮುಖ್ಯಾಧಿಕಾರಿ ಗಿರೀಶ್ ಅವರಿಗೆ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೆ.ಎಸ್. ನಾಗೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಮಾತನಾಡಿದ ಕೆ.ಎಸ್. ನಾಗೇಶ್, ಶೌಚಗೃಹದ ನೀರು ಚರಂಡಿ ಮೂಲಕ ಕಾವೇರಿ ನದಿಗೆ ಹರಿಸುವ ಆ ವ್ಯಕ್ತಿಗಳು ಕೂಡ ಅವರ ಮನೆಯಲ್ಲಿ ಅದೇ ನೀರು ಕುಡಿಯಬೇಕು ಎನ್ನುವ ಕನಿಷ್ಠ ಜ್ಞಾನ ಇಲ್ಲವಾಗಿದೆ. ಕಾವೇರಿ ನೀರು ಕುಡಿಯುವ ಲಕ್ಷಾಂತರ ಜನರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯಾಧಿಕಾರಿ ಗಿರೀಶ್ ತಕ್ಷಣವೇ ಸಂಬAಧಪಟ್ಟ ಎಲ್ಲರಿಗೂ ನೋಟಿಸ್ ನೀಡುತ್ತೇವೆ. ಆದರೂ ಎಚ್ಚೆತ್ತುಕೊಳ್ಳದಿದ್ದರೆ ಕೋರ್ಟ್ ಮೂಲಕ ದೊಡ್ಡ ಮಟ್ಟದ ದಂಡ ವಿಧಿಸುತ್ತೇವೆ ಎಂದು ತಿಳಿಸಿದರು.
ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ದೀಪಕ್ ಮಾತನಾಡಿ ಯಾವುದೇ ಲಾಡ್ಜ್ನವರು ನೀರು ಬಿಡುತ್ತಿದ್ದರೂ ಅವರ ಪರವಾನಗಿ ರದ್ದು ಮಾಡಿ ಎಂದು ಆಗ್ರಹಿಸಿದರು.
ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ. ಕೃಷ್ಣ ಮಾತನಾಡಿ, ಕಾವೇರಿ ಮಲಿನವಾಗುತ್ತಿದೆ. ಇದನ್ನು ತಡೆಗಟ್ಟಲು ವಿಫಲವಾದರೆ ನಾವು ಮುಂದೆ ಯಾವ ರೀತಿಯ ಹೋರಾಟ ಮಾಡಬೇಕು ಎನ್ನುವುದನ್ನು ಚರ್ಚಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಶಿವರಾಮೇಗೌಡ ಬಣದ ಕರವೇ ಜಿಲ್ಲಾಧ್ಯಕ್ಷ ದಿನೇಶ್ ಮಾತನಾಡಿ, ಯಾವ ಒತ್ತಡಕ್ಕೂ ಮಣಿಯದೆ ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಲಿ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡ ಹೆಚ್.ಕೆ. ನಟೇಶ್ ಗೌಡ, ಪುರಸಭೆ ಮಾಜಿ ಸದಸ್ಯ ಎಂ.ಕೆ. ದಿನೇಶ್, ಪ್ರಕಾಶ್, ಪ್ರಮುಖರಾದ ಎಂ.ಡಿ.ಕೃಷ್ಣಪ್ಪ, ಕರವೇಯ ಆನಂದ್, ಪುರಸಭೆ ಆರೋಗ್ಯಾಧಿಕಾರಿ ಉದಯ್ ಮತ್ತಿತರರು ಈ ಸಂದರ್ಭ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net