ಕೂಡಿಗೆಯಲ್ಲಿ ಪೋಷಕರ ಸಭೆ

ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆದ ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ಪೋಷಕರ ಸಭೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು.
ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆದ ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ಪೋಷಕರ ಸಭೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು.
Published on
ಕುಶಾಲನಗರ:
ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ಪೋಷಕರ ಸಭೆ ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.
ಪ್ರಥಮ ಮತ್ತು ದ್ವೀತಿಯ ಪಿಯುಸಿ ವಿದ್ಯಾರ್ಥಿಗಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಕ್ರಮದ ಮಾಹಿತಿ ನೀಡಿದರು.
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಈ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನಿರಂತರ ಎಂಬ ಆ್ಯಪ್‌ನೊಂದಿಗೆ ಮುಖ ಚರ್ಯೆ ಹಾಜರಾತಿಯನ್ನು ಜಾರಿಗೊಳಿಸಿದ್ದು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗಿದೆ. ಪ್ರತಿ ತಿಂಗಳು ಕಿರು ಪರೀಕ್ಷೆಗಳನ್ನು ನಡೆಸುವುದರ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಕಾಲೇಜಿನಲ್ಲಿ ವಿಶೇಷ ತರಗತಿಗಳು ಪ್ರಾರಂಭವಾಗಿದ್ದು ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳನ್ನ ಪೋಷಕರು ಕಳುಹಿಸಿ ಕೊಡಬೇಕೆಂದರು.
ಕಳೆದ ಸಾಲಿನ ಪಿಯುಸಿಯಲ್ಲಿ ಅತ್ಯುತ್ತಮ ಫಲಿತಾಂಶ ಬಂದಿರುವುದನ್ನು ಎಲ್ಲಾ ಪೋಷಕರ ಗಮನಕ್ಕೆ ತರಲಾಯಿತು. ಈ ಸಾಲಿನಲ್ಲೂ ಅದಕ್ಕಿಂತ ಇನ್ನೂ ಹೆಚ್ಚಿನ ಫಲಿತಾಂಶ ಬರಲು ಎಲ್ಲರೂ ಒಟ್ಟಾಗಿ ಸೇರಿ ಪ್ರಾರಂಭದಿAದಲೇ ಪ್ರಯತ್ನಿಸೋಣ ಎಂದು ಹೇಳಿದರು. ಅನೇಕ ಪೋಷಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊAಡರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೋಮಶೇಖರ್ ಅಗಮಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜು ಉಪನ್ಯಾಸಕ ಹನುಮರಾಜು, ಲೀನಟ್ ಫರ್ನಾಂಡಿಸ್, ಸೂಜಿ ತಂಗಚ್ಚನ್, ಎಂ.ಟಿ. ರಮೇಶ್, ಅನುಷಾ, ಗೌತಮಿ, ಆನಂದ್, ರವೀಶ್ ಸ್ವಾಗತಿಸಿ, ಪ್ರಗತಿ ಬಡಿಗೇರ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net