ದೇಶಪ್ರೇಮ, ಧೈರ್ಯ ಸದಾ ಸ್ಮರಣೀಯ

ಸೋಮವಾರಪೇಟೆ ಜೈ ಜವಾನ್ ಮಾಜಿ ಸೈನಿಕರ ಸಂಘದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನವನ್ನು ಆಚರಿಸಲಾಯಿತು. ಈರಪ್ಪ, ಸುಬ್ರಮಣಿ, ಬಸಪ್ಪ ಇದ್ದರು.
ಸೋಮವಾರಪೇಟೆ ಜೈ ಜವಾನ್ ಮಾಜಿ ಸೈನಿಕರ ಸಂಘದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನವನ್ನು ಆಚರಿಸಲಾಯಿತು. ಈರಪ್ಪ, ಸುಬ್ರಮಣಿ, ಬಸಪ್ಪ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜೈ ಜವಾನ್ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ ಅಭಿಪ್ರಾಯ
ಸೋಮವಾರಪೇಟೆ: ದೇಶದ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನವನ್ನು ಇಲ್ಲಿನ ಜೈ ಜವಾನ್ ಮಾಜಿ ಸೈನಿಕರ ಸಂಘದಿಂದ ಬುಧವಾರ ಆಚರಿಸಲಾಯಿತು.
ಸಂಘದ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಸಂಘದ ಅಧ್ಯಕ್ಷ ಈರಪ್ಪ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ದೇಶಪ್ರೇಮ, ಧೈರ್ಯ ಸದಾ ಸ್ಮರಣೀಯ. ಅಂತಹ ಮಹಾನ್ ನಾಯಕರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಸಂಘದ ಉಪಾಧ್ಯಕ್ಷ ಸುಬ್ರಮಣಿ, ಕಾರ್ಯದರ್ಶಿ ಆರ್.ಜಿ. ಬಸಪ್ಪ, ಖಜಾಂಚಿ ಎನ್.ಜಿ. ಕೆಂಪಯ್ಯ, ವೀರಪ್ಪ, ಪೂವಯ್ಯ, ಪ್ರಮುಖರಾದ ಎಂ.ಬಿ. ಉಮೇಶ್, ಭಾಸ್ಕರ್, ಮೋಹಿನಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net