ಸಿದ್ದಾಪುರ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯದ ಅರಣ್ಯ ಮಹಾವಿದ್ಯಾಲಯ, ಪೊನ್ನಂಪೇಟೆಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಸಂಪರ್ಕ ಕಾರ್ಯಕ್ರಮ ಅಂಗವಾಗಿ ಮಾರಗೋಡು ವಿವೇಕಾನಂದ ಯುವಕರ ಸಂಘದ ಸಭಾಂಗಣದಲ್ಲಿ ರೈತರಿಗೆ ಮಣ್ಣಿನ ಆರೋಗ್ಯ ಹಾಗೂ ಬೆಳೆ ನಿರ್ವಹಣೆ ಕುರಿತು ತರಬೇತಿ ಶುಕ್ರವಾರ ನೀಡಲಾಯಿತು.