ಜನವರಿಯಲ್ಲಿ ಫಾರ್ಮ ಭವನ ಉದ್ಘಾಟನೆ

ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ 27ನೇ ವಾರ್ಷಿಕ ಮಹಾಸಭೆ ಮತ್ತು ನಿರಂತರ ಕಲಿಕಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಅಂಬೇಕಲ್ ಜೀವನ್ ಕುಶಾಲಪ್ಪ ಮಾತನಾಡಿದರು. ಡಿ.ಐ. ಪುರುಷೋತ್ತಮ, ಪ್ರಸಾದ್ ಗೌಡ, ವಸಂತ್ ಇದ್ದರು.
ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ 27ನೇ ವಾರ್ಷಿಕ ಮಹಾಸಭೆ ಮತ್ತು ನಿರಂತರ ಕಲಿಕಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಅಂಬೇಕಲ್ ಜೀವನ್ ಕುಶಾಲಪ್ಪ ಮಾತನಾಡಿದರು. ಡಿ.ಐ. ಪುರುಷೋತ್ತಮ, ಪ್ರಸಾದ್ ಗೌಡ, ವಸಂತ್ ಇದ್ದರು.
Published on
ಮಡಿಕೇರಿ:
ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ 27ನೇ ವಾರ್ಷಿಕ ಮಹಾಸಭೆ ಮತ್ತು ನಿರಂತರ ಕಲಿಕಾ ಕಾರ್ಯಕ್ರಮ ಅಂಬೇಕಲ್ ಜೀವನ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಮಡಿಕೇರಿಯ ಕೂಟುಹೊಳೆಯಲ್ಲಿರುವ ಆಹನ್ ಹಿಲ್ಸ್ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸದಸ್ಯರು ನಿರಂತರ ಕಲಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿರಂತರ ಕಲಿಕಾ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಂಬೇಕಲ್ ಜೀವನ್ ಕುಶಾಲಪ್ಪ ಮಾತನಾಡಿ ಔಷಧ ನಿಯಂತ್ರಣ ಇಲಾಖೆ ಸಾರ್ವಜನಿಕ ಹಿತದೃಷ್ಟಿಯಿಂದ ಹೊರ ತರುತ್ತಿರುವ ಹೊಸ ಕಾನೂನುಗಳ ಬಗ್ಗೆ ಸೂಕ್ತ ರೀತಿಯಲ್ಲಿ ಅರಿತುಕೊಳ್ಳುವುದರ ಮೂಲಕ ಕಾನೂನು ಪಾಲನೆ ಅತ್ಯಗತ್ಯ. ಇತ್ತೀಚಿನ ದಿನಗಳಲ್ಲಿ ರೋಗ ನಿರೋಧಕ ಔಷಧಗಳು ದುರ್ಭಳಕೆಯಾಗುತ್ತಿರುವ ಬಗ್ಗೆ ಅಲ್ಲಲ್ಲಿ ವರದಿಗಳು ಬರುತ್ತಿದ್ದು ಆ ಬಗ್ಗೆ ಜನಜಾಗೃತಿ ಮತ್ತು ನಾರ್ಕೋಟಿಕ್ ಔಷಧಗಳ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಔಷಧಿ ವ್ಯಾಪಾರಸ್ಥರು ಮುಂದಾಗಬೇಕು. ಸಾರ್ವಜನಿಕರಿಗೆ ಮತ್ತು ರೋಗಿಗಳಿಗೆ ಔಷಧ ವ್ಯಾಪಾರಿಗಳ ಬಗ್ಗೆ ನಂಬಿಕೆ ಹೆಚ್ಚಿಸುವಲ್ಲಿ ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು. ನಕಲಿ ಔಷಧಗಳ ಹಾವಳಿಯನ್ನು ತಪ್ಪಿಸಲು ಈಗಾಗಲೇ ಔಷಧ ನಿಯಂತ್ರಣ ಇಲಾಖೆಯಿಂದ ಕ್ಯೂಆರ್ ಕೋಡ್ ವ್ಯವಸ್ಧೆ ಜಾರಿಯಾಗಿದ್ದು, ಅದನ್ನು ಪ್ರತಿಯೊಬ್ಬ ಔಷಧ ವ್ಯಾಪಾರಿ ಅಳವಡಿಸಿಕೊಂಡು ಪಾರದರ್ಶಕತೆಯೊಂದಿಗೆ ವ್ಯಾಪಾರ ಮಾಡುವ ಅಗತ್ಯವಿದೆ.
ಜಿಲ್ಲಾ ಸಂಘದ ಹಲವಾರು ವರ್ಷಗಳ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಉದ್ದೇಶಿತ ಫಾರ್ಮ ಭವನ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಭವನದ ಉದ್ಘಾಟನೆ ಜನವರಿಯಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಸಂಘದ ಕಾರ್ಯದರ್ಶಿ ಡಿ.ಐ. ಪುರುಷೋತ್ತಮ, ಖಜಾಂಜಿ ಪ್ರಸಾದ್ ಗೌಡ, ಜಂಟಿ ಕಾರ್ಯದರ್ಶಿ ವಸಂತ್ ಮತ್ತಿತರರು ಇದ್ದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕ ಮಾಹಿತಿಗಾಗಿ ಔಷಧಿ ವ್ಯಾಪಾರಸ್ಥರ ಸಂಘದಿAದ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net