ಸೋಮವಾರಪೇಟೆ ತಾಲೂಕು ಶ್ರೀಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಗೋಣಿಮರೂರು ಗ್ರಾಮದಲ್ಲಿ ಆಯೋಜಿಸಿದ್ದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು. ಹನುಂತಪ್ಪ, ಧರ್ಮಪ್ಪ, ನಂಜಪ್ಪ ಇದ್ದರು.
ತಾಲೂಕಿನ ಗೋಣಿಮರೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನಿಂದ ಇತ್ತೀಚೆಗೆ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಹಾಗೂ ಗ್ರಾಮದ ಗಣ್ಯರಾದ ನಿವೃತ್ತ ಸೈನಿಕ ಧರ್ಮಪ್ಪ, ನಿವೃತ್ತ ಶಿಕ್ಷಕ ನಂಜಪ್ಪ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್, ಕೆರೆ ಸಮಿತಿ ಅಧ್ಯಕ್ಷೆ ಪ್ರೇಮಾ ಹಾಗೂ ರೇವಣ್ಣ ಗಿಡ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿರು.
ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಲವು ಜನಪರ ಹಾಗೂ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಇಂತಹ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವ ಜತೆಗೆ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ನಿವೃತ್ತ ಶಿಕ್ಷಕ ನಂಜಪ್ಪ ಮಾತನಾಡಿದರು. ಕಾರ್ಯಕ್ರಮದ ಬಳಿಕ ಕೆರೆ ಅಂಗಳದಲ್ಲಿ ವಿವಿಧ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕ ಸ್ವಾಮಿ, ವಲಯ ಮೇಲ್ವಿಚಾರಕ ದೇವೇಂದ್ರ ಪ್ರಸಾದ್, ಒಕ್ಕೂಟ ಉಪಾಧ್ಯಕ್ಷ ಮನೋಜ್, ಸೇವಾ ಪ್ರತಿನಿಧಿ ಉಷಾ , ಗ್ರಾಮಸ್ಥರು ಇದ್ದರು.