ಕವಿತೆ ಮನುಷ್ಯನ ಅಂತಃಕರಣದ ಭಾಷೆಯ ಮಿಡಿತ

 ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆಶ್ರಯದಲ್ಲಿ ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ಜಿಲ್ಲಾ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕವಿಗೋಷ್ಠಿಯನ್ನು ಕವಯತ್ರಿ ಕೆ.ಜಿ. ರಮ್ಯ ಉದ್ಘಾಟಿಸಿದರು. ಜಗದೀಶ್ ಜೋಡುಬೀಟಿ, ಕೇಶವ ಕಾಮತ್, ಟಿ.ಪಿ. ರಮೇಶ್, ಕೈಬುಲಿರ ಪಾರ್ವತಿ ಬೋಪಯ್ಯ ಮತ್ತಿತರರು ಇದ್ದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆಶ್ರಯದಲ್ಲಿ ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ಜಿಲ್ಲಾ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕವಿಗೋಷ್ಠಿಯನ್ನು ಕವಯತ್ರಿ ಕೆ.ಜಿ. ರಮ್ಯ ಉದ್ಘಾಟಿಸಿದರು. ಜಗದೀಶ್ ಜೋಡುಬೀಟಿ, ಕೇಶವ ಕಾಮತ್, ಟಿ.ಪಿ. ರಮೇಶ್, ಕೈಬುಲಿರ ಪಾರ್ವತಿ ಬೋಪಯ್ಯ ಮತ್ತಿತರರು ಇದ್ದರು.
Published on
ಮಡಿಕೇರಿ:
ಮನುಷ್ಯನ ಅಂತಃಕರಣ ಭಾಷೆಯ ಒಳ ಮಿಡಿತಗಳು ತಿಳಿದಾಗ ವಿರಳವಾದ ಮತ್ತು ಸರಳವಾದ ಕಾವ್ಯ ಸೃಷ್ಟಿಯಾಗುವುದು ಎಂದು ಕವಿ ಜಗದೀಶ್ ಜೋಡುಬೀಟಿ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆಶ್ರಯದಲ್ಲಿ ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ಜಿಲ್ಲಾ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಶನಿವಾರ ಏರ್ಪಡಿಸಿದ್ದ ಕವಿಗೋಷ್ಠಿ ಮತ್ತು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಧುನಿಕ ಭಾವನೆಗಳನ್ನು ಪುರಾಣಗಳ ಅನುಭವದಲ್ಲಿ ಕರಗಿಸಿ ಅಭಿವ್ಯಕ್ತಿಪಡಿಸಿಕೊಂಡಾಗ ಸ್ಥಿರವಾದ ನೆಲೆಯಲ್ಲಿ ಕಾವ್ಯ ನಿಲ್ಲುತ್ತದೆ. ಕ್ಷಿತಿಜದದಾಚೆಗೂ ಒಂದು ಕಣ್ಣೋಟ ನೆಟ್ಟಾಗ ಕವಿತೆಗಳು ಪ್ರಬುದ್ಧತೆಯಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುತ್ತದೆ. ಕಾವ್ಯ ಕಟ್ಟುವುದು ಒಂದು ಕಸುಬುಗಾರಿಕೆ. ಬಿಡಿಯಾದ ಮಲ್ಲಿಗೆಯ ಮೊಗ್ಗನು ಮಾಲೆಯಾಗಿಸುವ ಕುಸುರಿ. ಪದಗಳು ಎದೆಯೊಳಗಿನ ಲಾಲಿತ್ಯದ ಗಿಲಿಕಿಯಾಗಬೇಕು. ಕವಿತೆ ಕಟ್ಟುವುದು ಧ್ಯಾನಸ್ಥ ಸ್ಥಿತಿಯ ಅವಲಂಬನೆ. ಆಧ್ಯಾತ್ಮದ ತಪಸ್ಸು, ಮತ್ತು ಹೊನಪು. ಕವಿತೆಯನ್ನು ಕಟ್ಟುವುದಲ್ಲ ಅದನ್ನು ಕೆತ್ತಬೇಕು. ಹಾಗೆ ಮಾಡಿದಾಗ ಕವಿತೆಗೆ ಒಂದು ಶಿಲೆಯ ಸೌಂದರ್ಯ ಸಿಗಬಲ್ಲದು. ಇಂತಹ ಕವಿತೆಗಳು ಸೃಷ್ಟಿಯಾದಾಗ ಜನರೆಡೆಯ ದಿಗಂತಗಳಲ್ಲಿ ಕಾವ್ಯ ವಿಸ್ತಾರಗೊಳ್ಳುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಹೇಳಿದರು.
ಕವಿಗೋಷ್ಠಿ ಉದ್ಘಾಟಿಸಿದ ಕವಯತ್ರಿ ಕೆ.ಜಿ. ರಮ್ಯ ಮಾತನಾಡಿ, ಕವಿತೆ ಅಂತರAಗದ ಅನುಭವಗಳ ಶ್ರಾವಿಕ ಅಭಿವ್ಯಕ್ತಿ. ಕವಿತೆ ನಿರಂತರ ಹರಿವು. ಅದನ್ನು ಪದಗಳಿಂದ ಕಟ್ಟಿಹಾಕಲು ಸಾಧ್ಯವಿಲ್ಲ. ಸಾಹಿತ್ಯದಲ್ಲಿ ಕಾವ್ಯ ಪ್ರಕಾರ ಸರಳ ಎನಿಸಿದರೂ ಅಪಾರ ಸಮಯ ಮತ್ತು ಅಂತರ್ ಶಕ್ತಿಯನ್ನು ಪಡೆದುಕೊಳ್ಳುತ್ತದೆ. ಶಬ್ದಗಳ ಚೌಕಟ್ಟಿಗೆ ನಿರ್ಬಂಧಿಸಿ ಕವಿತೆ ಬರೆದಾಗ ನಮ್ಮೊಳಗಿನ ಕವಿ ನಿರ್ಜೀವಿ ಆಗುತ್ತಾನೆ. ಕವಿತೆ ನಮ್ಮೊಳಗೆ ನಮ್ಮನ್ನು ಬೇರೆಯವರೊಳಗೆ ನಮ್ಮನ್ನು ಕಂಡುಕೊಳ್ಳಲು ಇರುವ ಸಾಧನ. ನಮ್ಮ ಚಿತ್ತಾ ಹುತ್ತಗಟ್ಟಬೇಕು. ಧ್ಯಾನಸ್ಥ ಸ್ಥಿತಿಗೆ ಕುಂಡೊಯ್ಯಬೇಕು. ಕವಿತೆ ವಸ್ತು ಪ್ರಕಾರದಲ್ಲಿ ಕಾಡಬೇಕು. ಇಂತಹ ಕವಿತೆಗಳನ್ನ ಬರೆಯುವುದು ಉತ್ತಮ. ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರ ಜತೆಗೆ ಭಾಷೆಯನ್ನು, ನಿಯಮಗಳನ್ನು ಮೀರಿ ಕವಿತೆಗಳನ್ನು ಹೊಸ ಹೊಸ ಪ್ರಯೋಗಳೊಂದಿಗೆ ಹೊಸೆಯುವ ವಿಚಾರದ ಕಡೆ ಯುವ ಸಮುದಾಯ ಮನ ಹಾಯಿಸಬೇಕು ಎಂದು ಹೇಳಿದರು.
ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡಿ, ದತ್ತಿನಿಧಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕಾರ್ಯವನ್ನು ಪರಿಷತ್ ಮುಂದುವರಿಸಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕಡೆ ಸಾಹಿತ್ಯದ ಒಲವÀನ್ನು ಮೂಡಿಸುವ ಸಲುವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದರು. ಅವುಗಳಲ್ಲಿ ಉತ್ತಮ ನಾಲ್ಕು ಪ್ರಬಂಧಗಳನ್ನು ಆಯ್ಕೆ ಮಾಡಿ ಬಹುಮಾನ ನೀಡಲಾಗಿದೆ ಎಂದರು.
ಕೊಡಗು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಸಾಹಿತ್ಯ ಪ್ರಕಾರಗಳನ್ನು ಹೆಚ್ಚು ತಿಳಿದುಕೊಳ್ಳುವ ಮೂಲಕ ಮಾನವೀಯ ಮೌಲ್ಯಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.
ದತ್ತಿ ದಾನಿಗಳಾದ ಕೈಬುಲಿರ ಪಾರ್ವತಿ ಬೋಪಯ್ಯ ಮಾತನಾಡಿ, ಮಕ್ಕಳು ಸಾಮಾಜಿಕ ಮೌಲ್ಯಗಳ ಬಗ್ಗೆ ಹೆಚ್ಚು ಆಸಕ್ತರಾಗಿ ವಿಚಾರಗಳನ್ನು ತಿಳಿದುಕೊಳ್ಳುವ ಮೂಲಕ ಸಮಾಜದ ಪ್ರಾಮುಖ್ಯತೆಯಾಗಿ ಕಾಣಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ನಿರ್ಮಲ ಮಾತನಾಡಿ, ಕಲಿಕೆ ಎಂಬುವುದು ಪ್ರತಿಯೊಬ್ಬ ವ್ಯಕ್ತಿಯ ನಿರಂತರವಾದ ಸಾಧನೆಯಾಗಿದೆ. ವಿಷಯ ವಸ್ತುಗಳನ್ನ ಹಂತಹAತವಾಗಿ ಕಲಿಯುವ ಮೂಲಕ ವಿದ್ಯಾರ್ಥಿಗಳು ಪ್ರೌಢತೆಯನ್ನ ಗಳಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಗಮಿಸಿದ ¸25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕವಿತ ವಾಚನ ಮಾಡಿದರು.
ಪ್ರಬಂಧ ಸ್ಪರ್ಧೆ ವಿಜೇತರುಗಳಾದ ಮನ ಕೆ.ಆರ್, ಫಹಿನಾ ಟಿ.ಎ, ಅನುಷಾ ಪಿ,ಅರ್, ಪ್ರೇಕ್ಷ ಜಿ.ಎಂ. ಅವರಿಗೆ ಇದೇ ಸಂದರ್ಭ ಬಹುಮಾನ ವಿತರಿಸಲಾಯಿತು.
ಕ.ಸಾ.ಪ. ಜಿಲ್ಲಾ ಸಂಘಟಾತ್ಮಕ ಕಾರ್ಯದರ್ಶಿ ವಾಸು ರೈ, ಪ್ರಧಾನ ಕಾರ್ಯದರ್ಶಿ ರೇವತಿ ರಮೇಶ್, ಕಾಲೇಜಿನ ಉಪನ್ಯಾಸಕರು, ಅಭಿವೃದ್ದಿ ಸಮಿತಿ ಸದಸ್ಯೆ ಪ್ರೇಮ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net