ಟ್ರಾಫಿಕ್ ತಡೆಗೆ ಪೊಲೀಸ್ ಇಲಾಖೆ ಕ್ರಮ

ವಿರಾಜಪೇಟೆಯಲ್ಲಿ  ರಸ್ತೆಬದಿ ಒಂದೇ ಕಡೆ ನಿಲ್ಲಿಸಿರುವ ವಾಹನಗಳನ್ನು ಪೊಲೀಸರು ತೆರವುಗೊಳಿಸಿದರು.
ವಿರಾಜಪೇಟೆಯಲ್ಲಿ ರಸ್ತೆಬದಿ ಒಂದೇ ಕಡೆ ನಿಲ್ಲಿಸಿರುವ ವಾಹನಗಳನ್ನು ಪೊಲೀಸರು ತೆರವುಗೊಳಿಸಿದರು.
Published on
ವಿರಾಜಪೇಟೆ: ಪಟ್ಟಣದಲ್ಲಿ ಸಂಚಾರ ಸಿಕ್ಕು ದಿನದಿಂದ ದಿನಕ್ಕೆ ಏರುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.
ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು, ಸುಗಮ ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿರುವ ಹಾಗೂ ದೀರ್ಘಕಾಲದಿಂದ ಒಂದೇ ಕಡೆ ನಿಲ್ಲಿಸಿರುವ ವಾಹನಗಳನ್ನು ತೆರವುಗೊಳಿಸುವ ಮತ್ತು ಟೋ ಮಾಡುವ ಕಾರ್ಯಾಚರಣೆಯನ್ನು ಪೊಲೀಸರು ಶುರು ಮಾಡಿದ್ದಾರೆ.
ಇದರೊಂದಿಗೆ ಉತ್ತಮ ಟ್ರಾಫಿಕ್ ನಿರ್ವಹಣೆಗಾಗಿ ನಿತ್ಯ ರಸ್ತೆಯಲ್ಲಿ ದಿನಕ್ಕೊಂದು ಬದಿ ಬದಲಿ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತರಲೂ ಯೋಚಿಸಿರುವುದಾಗಿ ಎಸ್ಪಿ ಆರ್.ಎನ್. ಬಿಂದುಮಣಿ ಮಾಹಿತಿ ನೀಡಿದ್ದಾರೆ.
ಪೊಲೀಸರ ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಸಂಚಾರ ದಟ್ಟಣೆಯ ಸಮಸ್ಯೆ ಹೆಚ್ಚಿರುವ ಗೋಣಿಕೊಪ್ಪಲು, ಪೊನ್ನಂಪೇಟೆಯಲ್ಲೂ ಇಂಥದ್ದೇ ಕ್ರಮಕ್ಕೆ ಮನವಿ ಮಾಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net