ಭಾಗಮಂಡಲದಲ್ಲಿ ಪೊಲಿಂಕಾನ ಉತ್ಸವ

ಭಾಗಮಂಡಲದಲ್ಲಿ ನಡೆದ ಪೊಲಿಂಕಾನ ಉತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಳೆದಿಂಡಿನಿAದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ಪೂಜೆ ಸಲ್ಲಿಸಲಾಯಿತು. 24ಎಂಡಿಕೆ04: ಭಾಗಮಂಡಲದಲ್ಲಿ ನಡೆದ ಪೊಲಿಂಕಾನ ಉತ್ಸವ ಕಾರ್ಯಕ್ರಮದ ಅಂಗವಾಗಿ ಪೂಜೆಯ ನಂತರ ಅಲಂಕೃತ ಮಂಟ¥ವನ್ನು ಕಾವೇರಿ ನದಿಯಲ್ಲಿ ತೇಲಿಬಿಡಲಾಯಿತು.
ಭಾಗಮಂಡಲದಲ್ಲಿ ನಡೆದ ಪೊಲಿಂಕಾನ ಉತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಳೆದಿಂಡಿನಿAದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ಪೂಜೆ ಸಲ್ಲಿಸಲಾಯಿತು. 24ಎಂಡಿಕೆ04: ಭಾಗಮಂಡಲದಲ್ಲಿ ನಡೆದ ಪೊಲಿಂಕಾನ ಉತ್ಸವ ಕಾರ್ಯಕ್ರಮದ ಅಂಗವಾಗಿ ಪೂಜೆಯ ನಂತರ ಅಲಂಕೃತ ಮಂಟ¥ವನ್ನು ಕಾವೇರಿ ನದಿಯಲ್ಲಿ ತೇಲಿಬಿಡಲಾಯಿತು.
Published on
ಮಡಿಕೇರಿ:
ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬುಧವಾರ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವ ವಿಶೇಷ ಪೂಜೆ ನಡೆಯಿತು. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಮಹಾಗಣಪತಿ, ಮಹಾವಿಷ್ಣು, ಸುಬ್ರಹ್ಮಣ್ಯ, ಭಗಂಡೇಶ್ವರ ದೇವಾಲಯಗಳಿಗೆ ಪೂಜೆ ಸಲ್ಲಿಸಿದ ಬಳಿಕ ಬಾಳೆದಿಂಡಿನಿAದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣವಿಟ್ಟು ವಿಶೇಷ ಪೂಜೆ ಮಾಡಿ ಭಗಂಡೇಶ್ವರ ದೇವಾಲಯದ ಸುತ್ತ ಪ್ರದಕ್ಷಿಣೆ ಮಾಡಲಾಯಿತು. ಬಳಿಕ ತ್ರಿವೇಣಿ ಸಂಗಮದಲ್ಲಿ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡು ವಿಸರ್ಜಿಸಲಾಯಿತು. ಈ ವ್ಯಾಪ್ತಿಯ ಭಕ್ತರು ಪೊಲಿಂಕಾನ ಉತ್ಸವದಲ್ಲಿ ಪಾಲ್ಗೊಂಡಿದ್ದರು.
ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ ಈ ವೇಳೆ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದಲ್ಲಿ ಪೊಲಿಂಕಾನ ಉತ್ಸವ ವಿಶೇಷ ಪೂಜೆ ಸಲ್ಲಿಸಲಾಗಿದೆ. ಭಗಂಡೇಶ್ವರ ದೇವಾಲಯದ ಎಲ್ಲಾ ದೇವರಿಗೆ ಪೂಜೆ ಪುನಸ್ಕಾರ ಕೈಗೊಂಡು ಕರಿಮಣಿ, ಚಿನ್ನದ ಸರ, ತೊಟ್ಟಿಲು, ಬೆಳ್ಳಿತಟ್ಟೆ ಮತ್ತಿತರ ವಸ್ತುಗಳನ್ನು ಸುಮಂಗಲಿಯ ಬಾಳೆ ದಿಂಡಿನ ಮಂಟಪಕ್ಕೆ ಹಾಕಿ ತ್ರಿವೇಣಿ ಸಂಗಮದಲ್ಲಿ ವಿಸರ್ಜಿಸುವ ಪದ್ಧತಿ ಹಿಂದಿನಿAದಲೂ ನಡೆದುಕೊಂಡು ಬಂದಿದೆ. ಜೀವನದಿ ಕಾವೇರಿ ನಾಡಿನಲ್ಲಿ ಉತ್ತಮ ಮಳೆಯಾಗಿ ರೈತರು, ನಾಡಿನ ಜನರಲ್ಲಿ ಸುಭಿಕ್ಷೆ ತರುವಂತಾಗಬೇಕು ಎಂದು ಪೊಲಿಂಕಾನ ಉತ್ಸವದಲ್ಲಿ ಪ್ರಾರ್ಥಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಭಾಗಮಂಡಲ ಭಗಂಡೇಶ್ವರ ದೇವಾಯಲಯದ ಪ್ರಧಾನ ಅರ್ಚಕ ಹರೀಶ್ ಭಟ್ ಮಾತನಾಡಿ ಆಷಾಢ ಮಾಸದ ಅಮಾವಾಸ್ಯೆ ದಿನದಂದು ಭಗಂಡೇಶ್ವರ ದೇವಾಲಯದಲ್ಲಿ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬಾಳೆದಿಂಡಿನಿAದ ಅಲಂಕರಿಸಿದ ಮಂಟಪಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪೊಲಿಂಕಾನ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ನಾಡಿನ ಜೀವನದಿ ಕಾವೇರಿಯ ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಇದಾಗಿದೆ. ವಜ್ರ ವೈಡೂರ್ಯಗಳಿಂದ ಅಲಂಕರಿಸಿ ಕಾವೇರಿ ಮಾತೆಗೆ ಬೇಕಾದ ವಸ್ತುಗಳನ್ನು ಬಾಗಿನ ಅರ್ಪಿಸುವ ಕಾರ್ಯಕ್ರಮವು ಪೊಲಿಂಕಾನದ ವಿಶೇಷ ಪೂಜಾ ಕಾರ್ಯಕ್ರಮವಾಗಿದೆ ಎಂದರು.
ಪೊಲಿಂಕಾನ ಉತ್ಸವದಲ್ಲಿ ಭಾಗಮಂಡಲ-ತಲಕಾವೇರಿ ದೇವಾಲಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಪಾರುಪತ್ಯೆದಾರ ಕೋಡಿ ಮಹೇಶ್, ಭಾಗಮಂಡಲ ತಕ್ಕ ಮುಖ್ಯಸ್ಥ ಬಲ್ಳಡ್ಕ ಅಪ್ಪಾಜಿ ಪ್ರಮುಖರಾದ ಕುದುಪಜೆ ಪ್ರಕಾಶ್ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net