ಆರ್.ಸಿ.ಎಚ್. ಅಧಿಕಾರಿ ಡಾ. ಮಧುಸೂದನ ಮಾತನಾಡಿ ಪಲ್ಸ್ ಪೋಲಿಯೋ ಹನಿ ನೀಡುವ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 471 ಬೂತ್ ತೆರೆಯಲಾಗಿದೆ. ಜನಸಂದಣಿ ಪ್ರದೇಶಗಳು, ಬಸ್ ನಿಲ್ದಾಣ ಹಾಗೂ ಪ್ರವಾಸಿ ಕೇಂದ್ರಗಳನ್ನು ಗುರಿಯಾಗಿಸಿ, 33 ಟ್ರಾನ್ಸಿಟ್ ಬೂತ್‌ಗಳನ್ನು ತೆರೆಯಲಾಗಿದ್ದು, ಮಡಿಕೇರಿ ತಾಲೂಕಿನಲ್ಲಿ 1 ಸಂಚಾರಿ ತಂಡವನ್ನು ಸಹ ನಿಯೋಜಿಸಲಾಗಿದೆ. ಜಿಲ್ಲೆಯಾದ್ಯಂತ ಲಸಿಕಾ ಬೂತ್ ಗಳಲ್ಲಿ ಕಾರ್ಯನಿರ್ವಹಿಸಲು 1952 ಲಸಿಕೆ ನೀಡುವವರು, 84 ಮಂದಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಜೂ. 29 ಮತ್ತು 30 ರಂದು ಗ್ರಾಮೀಣ ಪ್ರದೇಶದಲ್ಲಿ, ಜೂ. 29 ರಿಂದ ಜುಲೈ 1 ರ ವರೆಗೆ ನಗರ ಪ್ರದೇಶದಲ್ಲಿ ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆಯಿಂದ ಬಿಟ್ಟು ಹೋಗಿರುವ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.