ಪೊನ್ನಂಪೇಟೆ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಮಹಾಸಭೆ

ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಪ್ರೊ. ಇಟ್ಟಿರ ಕಮಲಾಕ್ಷಿ ಬಿದ್ದಪ್ಪ, ಕಾಳಿಮಾಡ ಮೋಟಯ್ಯ, ಕೋಟೆರ ಕಿಶನ್ ಉತ್ತಪ್ಪ ಮತ್ತಿತರರು ಇದ್ದರು.
ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಪ್ರೊ. ಇಟ್ಟಿರ ಕಮಲಾಕ್ಷಿ ಬಿದ್ದಪ್ಪ, ಕಾಳಿಮಾಡ ಮೋಟಯ್ಯ, ಕೋಟೆರ ಕಿಶನ್ ಉತ್ತಪ್ಪ ಮತ್ತಿತರರು ಇದ್ದರು.
Published on
ಮಡಿಕೇರಿ:
ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ಕೊಡವ ಸಮಾಜದ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಪ್ರೊ. ಇಟ್ಟಿರ ಕಮಲಾಕ್ಷಿ ಬಿದ್ದಪ್ಪ ಅಧ್ಯಕ್ಷತೆಯಲ್ಲಿ ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಹಾಗೂ ಗೌರವ ಕಾರ್ಯದರ್ಶಿ ಕೋಟೆರ ಕಿಶನ್ ಉತ್ತಪ್ಪ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಕೊಡವ ಮಹಿಳಾ ಸಬಲೀಕರಣ, ಪೊಮ್ಮಕ್ಕಡ ಕೂಟದ ಅಭ್ಯುದಯ ಮತ್ತು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿರುವ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.
ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಹಲವು ಸಲಹೆಗಳನ್ನು ನೀಡಿ ಕೂಟವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸಲು ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.
ಪೊಮ್ಮಕ್ಕಡ ಕೂಟದ ಉಪಾಧ್ಯಕ್ಷೆ ಮೀದೇರಿರ ಕವಿತಾ, ಕೊಡವ ಸಮಾಜದ ಉಪಾಧ್ಯಕ್ಷ ಚಿರಿಯಪಂಡ ಇಮ್ಮಿ ಉತ್ತಪ್ಪ, ಮೂಕಳೇರ ಕಾವ್ಯ ಮಧು, ಗುಮ್ಮಟ್ಟಿರ ಗಂಗಮ್ಮ, ಮೂಕಳೇರ ಪಟ್ಟು, ಮೂಕಳೇರ ಆಶಾ ಪೂಣಚ್ಚ, ಬಲ್ಯಮೀದೇರಿರ ಆಶಾ, ಚೆಕ್ಕೇರ ವಾಣಿ ಸಂಜು, ಕೋಣಿಯಂಡ ಕಾವ್ಯ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net