ತೋಕ್ ನಮ್ಮೆಯ ಸಂಚಾಲಕ ಸಣ್ಣವಂಡ ವಿನಯ್ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮಾಯಮುಡಿ ಗ್ರಾಪಂ ಅಧ್ಯಕ್ಷ ಆಪಟ್ಟಿರ ಟಾಟು ಮೊಣ್ಣಪ್ಪ, ಮಾಯಮುಡಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆಪಟ್ಟಿರ ಬೋಪಣ್ಣ, ಸದಸ್ಯರಾದ ಮಲ್ಲೇಂಗಡ ಮಮತಾ ಪೂಣಚ್ಚ, ಮಾಯಮುಡಿಯ ಕಾವೇರಿ ಅಸೋಸಿಯೇಷನ್ ಅಧ್ಯಕ್ಷ ಕಾಳಪಂಡ ಸುಧೀರ್, ಕಾಫಿ ಬೆಳೆಗಾರರಾದ ಸಣ್ಣುವಂಡ ಸರೋಜ, ಕೆ.ಸಿ. ನರೇಂದ್ರ, ಪುಚ್ಚಿಮಾಡ ರಾಯಿ ಮಾದಪ್ಪ, ಗೋಣಿಕೊಪ್ಪಲಿನ ಟಾಟಾ ಮೋಟರ್ಸ್ ವ್ಯವಸ್ಥಾಪಕ ಪುಳ್ಳಂಗಡ ಸಿಮ್ ಕುಟ್ಟಪ್ಪ, ವ್ಯವಸ್ಥಾಪಕ ಬೋಪಣ್ಣ, ಮೊದಲಾದವರು ಭಾಗವಹಿಸಿದ್ದರು. ದಿ.ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರ ಸ್ಮರಣಾರ್ಥವಾಗಿ ಅವರ ಪತ್ನಿ ಸುಜಿತಾ ಚಂಗಪ್ಪ ಅವರು ತೋಕ್ ನಮ್ಮೆಯ ಮಧ್ಯಾಹ್ನದ ಊಟವನ್ನು ಪ್ರಾಯೋಜಿಸಿದ್ದರು. ದಿನವಿಡೀ ನಡೆದ ಈ ತೋಕ್ ನಮ್ಮೆಯಲ್ಲಿ ಕೊಡಗು ಸೇರಿದಂತೆ ಹೊರಜಿಲ್ಲೆಗಳಿಂದಲೂ ನೂರಾರು ಸ್ಪರ್ಧಿಗಳು ಪಾಲ್ಗೊಂಡಿದ್ದರು.