ಶ್ರೀನಂದೀಶ್ವರ ಆಟೋ ಚಾಲಕರ, ಮಾಲೀಕರ ಸಂಘದ 14ನೇ ವಾರ್ಷಿಕ ಮಹಾಸಭೆ
ಪೊನ್ನಂಪೇಟೆಯ ನಂದೀಶ್ವರ ಆಟೋ ಚಾಲಕರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಜ್ಜಿಕುಟ್ಟೀರ ಪೊನ್ನಪ್ಪ, ಚಮ್ಮಟ್ಟೀರ ಶಾಂತ, ಸುರೇಶ್, ಮಂಜು ಹಾಗೂ ಇತರರಿದ್ದರು.
Published on:
Copied
Follow Us
ಪೊನ್ನಂಪೇಟೆ: ಪೊನ್ನಂಪೇಟೆಯ ಶ್ರೀನಂದೀಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ 14ನೇ ವಾರ್ಷಿಕ ಮಹಾಸಭೆಯನ್ನು ಭಾನುವಾರ ಇಲ್ಲಿನ ಮಹಿಳಾ ಸಮಾಜ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ಅಧ್ಯಕ್ಷತೆಯನ್ನು ಸಂಘದ ಸ್ಥಾಪಕ ಅಧ್ಯಕ್ಷ ಅಜ್ಜಿಕುಟ್ಟೀರ ಪೊನ್ನಪ್ಪ ವಹಿಸಿದ್ದರು. ಸಂಘದ ಸದಸ್ಯರ 7, 10 ಮತ್ತು 12ನೇ ತರಗತಿಯಲ್ಲಿ ಶೇಕಡ 70ಕ್ಕಿಂತ ಅಧಿಕ ಅಂಕದಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಸಂಘದ ವತಿಯಿಂದ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಅಜ್ಜಿಕುಟ್ಟೀರ ಪೊನ್ನಪ್ಪ ಮಾತನಾಡಿ, ಆಟೋ ಚಾಲಕರು ಸಮಾಜದ ಕಣ್ಣಿದ್ದಂತೆ, ಪೊನ್ನಂಪೇಟೆ ಆಟೋ ಚಾಲಕರ ಸಂಘದಿಂದ ಈ ಭಾಗದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದು ಮುಂದೆಯೂ ಹೀಗೆಯೇ ಮುಂದುವರಿಯಲಿ ಎಂದು ಹಾರೈಸಿದರು.
ಸಭೆಯಲ್ಲಿ ಅಧ್ಯಕ್ಷರಿಗೆ ಸಂಘದ ವತಿಯಿಂದ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಉಪಾಧ್ಯಕ್ಷ ಚಮ್ಮಟ್ಟಿರ ಶಾಂತ ಪೊನ್ನಪ್ಪ, ಕಾರ್ಯದರ್ಶಿ ಸುರೇಶ್, ಖಜಾಂಚಿ ಮಂಜು ಹಾಗೂ ಸದಸ್ಯರು ಹಾಜರಿದ್ದರು.