ರಸ್ತೆ ಸುರಕ್ಷತಾ ಸಪ್ತಾಹ ಅಭಿಯಾನ

  ಪೊನ್ನಂಪೇಟೆಯಲ್ಲಿ ರಸ್ತೆ ಸುರಕ್ಷತೆ ಸಪ್ತಾಹ ಮೆರವಣಿಗೆಯಲ್ಲಿ ಪಾಲ್ಗೊಂಡ ಕೆಪಿಎಸ್ ಶಾಲಾ ವಿದ್ಯಾರ್ಥಿಗಳು.
ಪೊನ್ನಂಪೇಟೆಯಲ್ಲಿ ರಸ್ತೆ ಸುರಕ್ಷತೆ ಸಪ್ತಾಹ ಮೆರವಣಿಗೆಯಲ್ಲಿ ಪಾಲ್ಗೊಂಡ ಕೆಪಿಎಸ್ ಶಾಲಾ ವಿದ್ಯಾರ್ಥಿಗಳು.
Published on
ಪೊನ್ನಂಪೇಟೆ.: ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಪೊನ್ನಂಪೇಟೆ ಪೊಲೀಸ್ ಠಾಣೆ ಇವರ ವತಿಯಿಂದ ಪಟ್ಟಣದಲ್ಲಿ ಶುಕ್ರವಾರ (ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಅಭಿಯಾನ ನಡೆಸಲಾಯಿತು.
ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ 5, 6 ಮತ್ತು 7 ನೇ ತರಗತಿಯ ವಿದ್ಯಾರ್ಥಿಗಳು ಪಟ್ಟಣದ ಮುಖ್ಯ ರಸ್ತೆಯಲ್ಲಿ ಸೀಟ್ ಬೆಲ್ಟ್ ಧರಿಸಿ, ಹೆಲ್ಮೆಟ್ ಧರಿಸಿ, ಜೀವ ಉಳಿಸಿ ಎಂಬ ಘೋಷಣೆಗಳೊಂದಿಗೆ ಮೆರವಣಿಗೆಯನ್ನು ನಡೆಸಿದರು. ನಂತರ ಪೊನ್ನಂಪೇಟೆ ಪೋಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ನವೀನ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ, ಮಾದಕ ವಸ್ತುಗಳ ಸೇವನೆ, ವಿದ್ಯಾರ್ಥಿಗಳ ಶೋಷಣೆ, ಮುಂತಾದ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸಿದರು.
ಮೆರವಣಿಗೆಯಲ್ಲಿ ಪೊನ್ನಂಪೇಟೆ ಪೋಲಿಸ್ ಠಾಣೆ ಠಾಣಾಧಿಕಾರಿ ನವೀನ್, ಪೊಲೀಸ್ ಸಿಬ್ಬಂದಿಗಳು, ಕೆಪಿಎಸ್ ಶಾಲಾ ಮುಖ್ಯ ಶಿಕ್ಷಕರಾದ ವಿಜಯ್ ಬಿ.ಎಂ, ಶಿಕ್ಷಕಿಯರಾದ ರೋಝಿ ಐ.ಎಂ, ಝಾನ್ಸಿ, ರೇಖಾ,ಪೂರ್ಣೀಮ, ರಮ್ಯಾ, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net