ಈ ಸಂದರ್ಭ ಮಾತನಾಡಿದ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್. ಭರತ್, ಬಿಪಿಎಂಸಿ, ಮಿಲ್ ಗೋಡೌನ್ ವೇರಹೌಸ್, ನಗರ ಗ್ರಾಮೀಣ ಬಜಾರ, ಬಸ್ ಸ್ಟಾö್ಯಂಡ್, ರೈಲ್ವೆ ಸ್ಟೇಷನ್, ಬಂದರುಗಳಲ್ಲಿ ಲೋಡಿಂಗ್ ಅನ್‌ಲೋಡಿಂಗ್ ಕೆಲಸ ನಿರ್ವಹಿಸುವವರು ಅಸಂಘಟಿತ ಕಾರ್ಮಿಕರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ನಿರ್ವಹಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯಿAದ ಅಂಬೇಡ್ಕರ್ ಸಹಾಯ ಹಸ್ತ ಸ್ಮಾರ್ಟ್ ಪಡೆದ ಹಮಾಲಿ ಕಾರ್ಮಿಕರು ಸೇರಿದಂತೆ 85ಕ್ಕೂ ಹೆಚ್ಚು ವಲಯದ ಅಸಂಘಟಿತ ಕಾರ್ಮಿಕರಿಗೆ ಕೇವಲ ಅಪಘಾತ ಸಂಬAಧಿಸಿದ ಕೆಲ ಪರಿಹಾರ ನೀಡುವ ಯೋಜನೆಗಳನ್ನು ಜಾರಿ ಮಾಡಿದೆ. ಆದರೆ ಸಕಾರ ನಿರ್ಧಿಷ್ಟವಾಗಿ ಯಾವುದೇ ಹಣಕಾಸಿನ ನೆರವು ನೀಡಿಲ್ಲ.