ನಿಲುವಾಗಿಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ, ಗರ್ಭಿಣಿಯರಿಗೆ ಸೀಮಂತಶಾಸ್ತ್ರ ನಡೆಯಿತು. ಕಮಲಮ್ಮ, ಸವಿತಮ್ಮ, ಕೀರ್ತಿ, ಶೃತಿ, ಪವಿತ್ರಾ ಇದ್ದರು.
ಶನಿವಾರಸಂತೆ: ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಶನಿವಾರ ಜರುಗಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಅಂಗನವಾಡಿ ಕೇಂದ್ರಗಳ ಸಹಯೋಗದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ, ಗರ್ಭಿಣಿಯರಿಗೆ ಸೀಮಂತ ಶಾಸ್ತ್ರ ನೆರವೇರಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಬೆಸೂರು ಗ್ರಾಪಂ ಅಧ್ಯಕ್ಷೆ ಕಮಲಮ್ಮ, ಸದಸ್ಯರಾದ ಕಿಶನ್, ಕೀರ್ತಿ, ರಾಮು, ದಯಾಕರ, ಮಹಿಳಾ ಮತ್ತು ಮಕ್ಕಳ ಇಲಾಖೆ ಮೇಲ್ವಿಚಾರಕಿ ಸಾವಿತ್ರಮ್ಮ, ವ್ಯೆದ್ಯೆ ಶೃತಿ, ಪವಿತ್ರಾ, ಪಾರ್ವತಿ, ಸೌಮ್ಯಾ, ಶಾರದಾ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಇದ್ದರು.