ನಾಪೋಕ್ಲು: ಸರ್ಕಾರಿ ಪ್ರಾಥಮಿಕ ಶಾಲಾ ಸಮೀಪ ಗುರುವಾರ ಸುರಿದ ಮಳೆಗೆ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ನಾಪೋಕ್ಲು - ಹಳೇ ತಾಲೂಕು ಮುಖ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಮರ ಬುಡ ಸಮೇತ ರಸ್ತೆಯ ಬದಿಗೆ ಉರುಳಿತು. ಈ ಪರಿಣಾಮ ಟ್ರಾನ್ಸ್ ಫಾರ್ಮರ್, ಕಂಬ ಜಖಂಗೊಂಡು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿ ಸುತ್ತಮುತ್ತಲ ಗ್ರಾಮದ ಜನರು ಕತ್ತಲೆಯಲ್ಲೇ ಕಾಲ ಕಳೆಯಬೇಕಾಯಿತು. ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು. ತುರ್ತು ಕಾರ್ಯಾಚರಣೆ ನಡೆಯುತ್ತಿದ್ದು, ಶನಿವಾರ ಸಂಜೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿ ಸೆಸ್ಕ್ ಸಹಾಯಕ ಇಂಜಿನಿಯರ್ ಹರೀಶ್ ತಿಳಿಸಿದ್ದಾರೆ.