ರಸ್ತೆಯ ಬದಿಯಲ್ಲಿ ಪ್ಲಾಸ್ಟಿಕ್, ಗಾಜು ಹಾಗೂ ಇತರ ತ್ಯಾಜ್ಯಗಳನ್ನು ಎಸೆಯುತ್ತಿರುವುದರಿಂದ ಕಾವೇರಿ ನದಿ ಮಲಿ Ãನಗೊಳ್ಳುವುದರ ಜತೆಗೆ ಗ್ರಾಮದ ಸೌಂದರ್ಯಕ್ಕೂ ಧಕ್ಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಉದ್ದಕ್ಕೂ ಎಚ್ಚರಿಕೆ ಫಲಕಗಳನ್ನು ಅಳವಡಿಸಿ, ತ್ಯಾಜ್ಯ ಎಸೆಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಪಂಚಾಯಿತಿ ಅಧಿಕಾರಿಗಳು, ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.