

ಕೊಡಗು ಜಿಲ್ಲಾಸ್ಪತ್ರೆ ವೇಗದಲ್ಲಿ ಅಭಿವೃದ್ಧಿ ಕಾಣುತ್ತಿದೆ. ವೈದ್ಯರ ಕೊರತೆಯಿದ್ದರೂ ಇರುವ ವೈದ್ಯರಿಂದ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ರೇಡಿಯೋಲಾಜಿಸ್ಟ್ ಹೊರತುಪಡಿಸಿ ಬೇರೆಲ್ಲ ವಿಭಾಗದಲ್ಲೂ ವೈದ್ಯರಿದ್ದಾರೆ. ಈ ಹುದ್ದೆ ಭರ್ತಿಗೆ ಆಹ್ವಾನಿಸಲಾಗಿದೆ. ಆದರೆ, ಕೊಡಗಿಗೆ ಆಗಮಿಸಲು ವೈದ್ಯರು ಹಿಂದೇಟು ಹಾಕುತ್ತಿದ್ದಾರೆ. ಸೂಪರ್ ಸ್ಪೆಷಾಲಿಟಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ. ವೈದ್ಯಕೀಯ ಕಾಲೇಜು ಸುಪರ್ದಿಯಲ್ಲಿರುವ ಜ. ತಿಮ್ಮಯ್ಯ ವೃತ್ತದ ಬಳಿ ಇರುವ ಐಬಿ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾಪವಿದೆ.
ಕೊಡಗು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಸೇವೆ ಉತ್ತಮಪಡಿಸುವ ನಿಟ್ಟಿನಲ್ಲಿ ಎಲ್ಲಾ ಸ್ಕಾö್ಯನಿಂಗ್ ಸೇವೆಗಳನ್ನು ಒಂದೇ ಕಟ್ಟಡದಲ್ಲಿ ತರಲಾಗುವುದು. ಒಪಿಡಿ ಕೌಂಟರ್‌ಗಳನ್ನು ಹೆಚ್ಚಿಸುವ ಸಂಬAದ ಪ್ರಕ್ರಿಯೆ ಚಾಲನೆಯಲ್ಲಿದೆ. ಹೆಲ್ಪ್ ಡೆಸ್ಕ್ ಕೂಡ ಆರಂಭಿಸಲಾಗುವುದು. ಐಟಿಡಿಪಿ ಇಲಾಖೆಯಿಂದಲೂ ಇಬ್ಬರು ಸಿಬ್ಬಂದಿ ನಿಯೋಜನೆಯಾಗಲಿದ್ದು, ಅವರಿಂದಲೂ ರೋಗಿಗಳಿಗೆ ಸಹಾಯ ದೊರೆಯಲಿದೆ.