

ಪ್ರಮುಖ ಮುಖ್ಯಾಂಶಗಳು
ಕಳೆದ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕೊಡಗು ರಾಜ್ಯದಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿತ್ತು. ಈ ವರ್ಷ 2ನೇ ಸ್ಥಾನಕ್ಕೆ ಏರಬೇಕು ಎನ್ನುವುದು ನಮ್ಮ ಗುರಿ. ಇದಕ್ಕೆ ಅಗತ್ಯವಿರುವ ಕಾರ್ಯಕ್ರಮಗಳು, ಮಾಹಿತಿಗಳನ್ನು ಶಿಕ್ಷಕ ವರ್ಗಕ್ಕೆ ಒದಗಿಸುವ ಮೂಲಕ ಬೆಂಬಲ ಕೊಡುವ ಕೆಲಸ ಹೆಚ್ಚಾಗಿ ಮಾಡಿದ್ದೇವೆ. ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕರ ಮೂಲಕವೂ ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿದೆ. ಒಟ್ಟಾರೆಯಾಗಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಪ್ರತಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಉತ್ತಮಪಡಿಸಲು ಶಿಕ್ಷಣ ಇಲಾಖೆ ದಿಟ್ಟ ಕ್ರಮ ಕೈಗೊಂಡಿದೆ.