ಕಸಾಪ ಸಮ್ಮೇಳನ ಸಂಬಂಧ ಪೂರ್ವಭಾವಿ ಸಭೆ

ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಿಶಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.
ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಿಶಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.
Published on
ಸುಂಟಿಕೊಪ್ಪ: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಿಶಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತು ಪೂರ್ವಭಾವಿ ಸಭೆಯನ್ನು ಭಾನುವಾರ ಖಾಸಗಿ ಹೋಟೆಲ್‌ನಲ್ಲಿ ನಡೆಸಲಾಯಿತು.
ಸಭೆಯಲ್ಲಿ ಸಮ್ಮೇಳನ ನಡೆಸುವ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ವಿವಿಧ ಉಪಸಮಿತಿಗಳ ರಚನೆ ಹಾಗೂ ಇನ್ನಿತರ ವಿಷಯ ಕುರಿತು ಚರ್ಚಿಸಲು ಮಾ.24ರ ಮಂಗಳವಾರ ಮತ್ತೊಂದು ಸಭೆಯನ್ನು ಸುಂಟಿಕೊಪ್ಪ ಕೊಡವ ಸಮಾಜ ಸಭಾಂಗಣದಲ್ಲಿ ನಡೆಸಲು ತಿರ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಕಸಾಪ ಹಿರಿಯ ಸದಸ್ಯ ಬಿ.ಸಿ.ದಿನೇಶ್ ಅವರನ್ನು ಕೊಡಗು ಜಿಲ್ಲಾ ಕಸಾಪ ವತಿಯಿಂದ ಅಭಿನಂದಿಸಲಾಯಿತು.
ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್.ಸಬಾಸ್ಟಿನ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ಎಂ.ಕೆ.ವಾಸು ರೈ, ಕುಶಾಲನಗರ ತಾಲೂಕು ಕಸಾಪದ ಸಂಘಟನಾ ಕಾರ್ಯದರ್ಶಿ ಗುಡ್ಡೆಮನೆ ಹರೀಶ್, ನಿರ್ದೇಶಕರಾದ ಬಿ.ಸಿ.ದಿನೇಶ್ ಕಸಾಪದ ಹಿರಿಯ ಸದಸ್ಯರಾದ ಲೀಲಾಮೇದಪ್ಪ, ಕೆ.ಪಿ.ಜಗನ್ನಾಥ್, ಸುಂಟಿಕೊಪ್ಪ ಹೋಬಳಿ ಕಸಾಪ ನಿಕಟಪೂರ್ವ ಅಧ್ಯಕ್ಷ ವಹೀದ್‌ಜಾನ್, ಹೋ.ಕಸಾಪ ಕಾರ್ಯದರ್ಶಿ
ಕೆ.ಎಸ್.ಅನಿಲ್‌ಕುಮಾರ್, ಕೊಡಗು ಕಸಾಪ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net