ಈ ಸಂದರ್ಭ ಶೈಕ್ಷಣಿಕ ಸಾಧಕರಿಗೆ ಹಾಗೂ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಅಜಿತ್ ಅಪ್ಪಚ್ಚು, ಕಾರ್ಯದರ್ಶಿ ಎಂ.ಬಿ. ಬೋಪಣ್ಣ, ಸದಸ್ಯರಾದ ಬೋಜಮ್ಮ, ಪ್ರಕಾಶ್, ವಾಣಿಜ್ಯ ಇಲಾಖೆಯ ನಿವೃತ್ತ ಅಡಿಷನಲ್ ಕಮಿಷನರ್ ಬಿ.ಎ. ನಾಣಿಯಪ್ಪ, ಮಂಜುನಾಥ, ಉಪನ್ಯಾಸಕ ರಾಜ ಸುಂದರA, ಪ್ರೌಢಶಾಲಾ ಮುಖ್ಯ ಶಿಕ್ಷಕಿ ರೀಟಾ, ಆಂಗ್ಲ ಮಾಧ್ಯಮದ ಆಡಳಿತ ಮಂಡಳಿ ಸದಸ್ಯರಾದ ಮಲ್ಲಿಕಾ ಬೋಪಣ್ಣ , ಮಿಮ್ಮಿ ಚಿಟ್ಟಿಯಣ್ಣ ಸಂಸ್ಥೆಯ ನಿವೃತ್ತ ಶಿಕ್ಷಕರು, ಪೋಷಕರು, ಹಳೇ ವಿದ್ಯಾರ್ಥಿಗಳು ಇದ್ದರು. ಆಂಗ್ಲ ಮಾಧ್ಯಮದ ಪುಟಾಣಿಗಳು, ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.