ಮಹಿಳೆಯರ ಸಬಲೀಕರಣಕ್ಕಾಗಿ ಹಕ್ಕೊತ್ತಾಯ ಮಂಡನೆ

ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿತು.
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿತು.
Published on

ಪ್ರಮುಖ ಮುಖ್ಯಾಂಶಗಳು

  • ಮಹಿಳೆಯರ ಸಬಲೀಕರಣಕ್ಕಾಗಿ ಹಕ್ಕೊತ್ತಾಯ ಮಂಡನೆ
  • ಮಹಿಳೆಯರಿಗೆ ಸಂವಿಧಾನದತ್ತವಾದ ಹಕ್ಕುಗಳನ್ನು ನೀಡಬೇಕು: ನಾಚಪ್ಪ
ಮಡಿಕೇರಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿತು.
ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮಹಿಳೆಯರಿಗೆ ಸಂವಿಧಾನದತ್ತವಾದ ಹಕ್ಕುಗಳನ್ನು ನೀಡಬೇಕು. ದೇಶಾದ್ಯಂತ ಕೊಡವ ಮಹಿಳೆಯರಿಗೆ ಶೇ.೩೩ ಮೀಸಲಾತಿ ಆಂತರಿಕ ಕೋಟಾದಡಿ ನೀಡಬೇಕು. ಸ್ವಾಯತ್ತ ಕೊಡವ ಲ್ಯಾಂಡ್ ಘೋಷಿಸಬೇಕು, ನೆಲ, ಜಲ, ಭಾಷೆ, ಸಂಸ್ಕೃತಿ, ಪರಪಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯದೊಂದಿಗೆ ಸಾಂವಿಧಾನಿಕ ಭದ್ರತೆಯನ್ನು ಖಾತ್ರಿ ಪಡಿಸಬೇಕು. ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು. ಕೊಡವರ ಜನ್ಮಸಿದ್ಧ ಹಕ್ಕಾಗಿರುವ ಕೋವಿ ಹೊಂದುವ ವಿನಾಯಿತಿಯನ್ನು ಶಾಶ್ವತಗೊಳಿಸಬೇಕು. ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡಬೇಕು, ಕೊಡವ ಭಾಷೆಯನ್ನು ಸಂವಿಧಾನದ ೮ನೇ ಶೆಡ್ಯೂಲ್‌ಗೆ ಸೇರಿಸಬೇಕು. ಸಂಸತ್ ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಎನ್.ಯು.ನಾಚಪ್ಪ ಒತ್ತಾಯಿಸಿದರು.
ಕೊಡವ ಯೋಧರು ದೇಶ ರಕ್ಷಣೆಯ ಮೂಲಕ ರಕ್ಷಣಾ ಪಡೆಗಳಿಗೆ ಅಪಾರ ಕೊಡುಗೆಯನ್ನು ನೀಡಿ ಹೆಸರುವಾಸಿಯಾಗಿದ್ದಾರೆ. ಈ ವೀರ ಪರಂಪರೆಯನ್ನು ಕಾಪಾಡುವಲ್ಲಿ ಕೊಡವ ಮಹಿಳೆಯರ ಪಾತ್ರ ಅನನ್ಯವಾಗಿದೆ. ಆದ್ದರಿಂದ ಸಂಸತ್ತಿನ ಕಲಾಕೃತಿಗಳು, ಗ್ಯಾಲರಿಗಳು ಅಥವಾ ಸಾಂಸ್ಕೃತಿಕ ಪ್ರದರ್ಶನಗಳಲ್ಲಿ ಕೊಡವ ಮಹಿಳೆಯರ ಶೌರ್ಯ, ಕೃಷಿ ಸಂಸ್ಕೃತಿ ಮತ್ತು ಅವರ ವಿಶಿಷ್ಟ ಉಡುಗೆಯಾದ ಕೊಡವ ಸೀರೆಯ(ಹಿಮ್ಮಡಿ ಉಡುಗೆ) ಚಿತ್ರಣವನ್ನು ಅಳವಡಿಸುವುದರಿಂದ ಇಡೀ ರಾಷ್ಟ್ರಕ್ಕೆ ಕೊಡವರ ಕೊಡುಗೆಯನ್ನು ಪರಿಚಯಿಸಲು ಸಹಕಾರಿಯಾಗುತ್ತದೆ ಎಂದರು.
ಕೊಡವ ಪುರುಷರು ಹಾಗೂ ಕೊಡವ ಮಹಿಳೆಯರು ಇಬ್ಬರೂ ಬಂದೂಕುಗಳನ್ನು ಹೊಂದಲು ವಿಶೇಷ ಶಾಸನಬದ್ಧ ಹಕ್ಕನ್ನು ಹೊಂದಿದ್ದಾರೆ. ಆದರೆ, ಕೊಡವ ಮಹಿಳೆಯರು ಬಂದೂಕು ವಿನಾಯಿತಿ ಸವಲತ್ತು ಪ್ರಮಾಣಪತ್ರಗಳನ್ನು ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ. ಸರ್ಕಾರ ಯುದ್ಧೋಪಾದಿಯಲ್ಲಿ ಕೊಡವ ಮಹಿಳೆಯರಿಗೆ ಬಂದೂಕು ವಿನಾಯಿತಿ ಪ್ರಮಾಣಪತ್ರವನ್ನು ನೀಡಬೇಕು. ಶಿಕ್ಷಣ ಪಡೆಯುತ್ತಿರುವ ಹೆಣ್ಣು ಮಕ್ಕಳಿಗೆ ಹಾಗೂ ಉದ್ಯೋಗದಲ್ಲಿರುವ ಕೊಡವ ಮಹಿಳೆಯರಿಗೆ ಋತುಚಕ್ರದ ಸಂದರ್ಭ ವೇತನ ಸಹಿತ ೩ ದಿನಗಳ ರಜೆ ನೀಡಬೇಕು. ಕೊಡವರ ಇತಿಹಾಸವನ್ನು ತಿರುಚುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ನೈಜ ಇತಿಹಾಸವನ್ನು ಮರುಸ್ಥಾಪಿಸಬೇಕು. ೨೦೨೭ರ ರಾಷ್ಟ್ರೀಯ ಜನಗಣತಿಯಲ್ಲಿ ಆದಿಮಸಂಜಾತ ಏಕಜನಾಂಗೀಯ ಅನಿಮಿಸ್ಟಿಕ್ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಅಳವಡಿಸಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿದ ಎನ್.ಯು.ನಾಚಪ್ಪ ಅವರು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿ ಹಾಗೂ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭ ಕಲಿಯಂಡ ಮೀನಾ ಪ್ರಕಾಶ್, ಬೊಟ್ಟಂಗಡ ಸವಿತಾ ಗಿರೀಶ್, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಪಟ್ಟಮಾಡ ಲಲಿತಾ ಗಣಪತಿ, ರೇಖಾ ನಾಚಪ್ಪ, ಅರೆಯಡ ಸವಿತಾ ಗಿರೀಶ್, ಮುದ್ದಿಯಡ ಲೀಲಾವತಿ, ಪಚ್ಚಾರಂಡ ಶಾಂತಿ ಪೊನ್ನಪ್ಪ, ಹೊಟ್ಟೆಯಂಡ ಫ್ಯಾನ್ಸಿ ಬೆಳ್ಯಪ್ಪ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ ಗಣಪತಿ, ಬಾಚರಣಿಯಂಡ ಚಿಪ್ಪಣ್ಣ, ಕಿರಿಯಮಾಡ ಶೆರಿನ್, ಬೇಪಡಿಯಂಡ ಬಿದ್ದಪ್ಪ, ಮಣವಟಿರ ಚಿಣ್ಣಪ್ಪ, ಚೋಳಪಂಡ ನಾಣಯ್ಯ, ಪಾಲೆಕಂಡ ಪ್ರಧಾನ್ ಪೂಣಚ್ಚ, ಮಂದಪಂಡ ಮನೋಜ್ ಮಂದಣ್ಣ, ಮಣವಟ್ಟಿರ ಜಗದೀಶ್, ಪುದಿಯೊಕ್ಕಡ ಪೃಥ್ವಿ, ಮೇದುರ ಕಂಠಿ ನಾಣಿಯಪ್ಪ, ಮಣವಟ್ಟಿರ ನಂದ, ಮಂದಪಂಡ ವಿಹಾನ್ ದೇವಯ್ಯ, ಪೊರಿಮಂಡ ಧ್ಯಾನ್ ಪೊನ್ನಣ್ಣ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net