ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿ

ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಹೋಂ ಸ್ಟೇ ಹಾಗೂ ರೆಸಾರ್ಟ್ ಮಾಲೀಕರ ಸಭೆಯಲ್ಲಿ  ಠಾಣಾಧಿಕಾರಿ ಮೋಹನ್ ರಾಜ್ ಮಾತನಾಡಿದರು.
ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಹೋಂ ಸ್ಟೇ ಹಾಗೂ ರೆಸಾರ್ಟ್ ಮಾಲೀಕರ ಸಭೆಯಲ್ಲಿ ಠಾಣಾಧಿಕಾರಿ ಮೋಹನ್ ರಾಜ್ ಮಾತನಾಡಿದರು.
Published on
ಸುಂಟಿಕೊಪ್ಪ: ಸುಂಟಿಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೋಂ ಸ್ಟೇ ನಡೆಸುವವರು ಮೊದಲಿಗೆ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆಯ ಠಾಣಾಧಿಕಾರಿ ಮೋಹನ್ ರಾಜ್ ಹೋಂ ಸ್ಟೇ ಮತ್ತು ರೇಸಾರ್ಟ್ ಮಾಲೀಕರಿಗೆ ಸಲಹೆ ನೀಡಿದರು.
ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಗುರುವಾರ ಆಯೋಜಿಸಿದ್ದ ಹೋಂ ಸ್ಟೇ ಹಾಗೂ ರೆಸಾರ್ಟ್ ಮಾಲೀಕರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿ, ಪೊಲೀಸ್ ಇಲಾಖೆಯ ನಿಯಮ, ಪ್ರವಾಸೋದ್ಯಮ ಇಲಾಖೆಯ ಅಧಿಕೃತ ಮಾರ್ಗಸೂಚಿಗಳನ್ವಯ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಹೋಂ ಸ್ಟೇ, ರೆಸಾರ್ಟ್‌ಗಳು ಕಡ್ಡಾಯವಾಗಿ ನೋಂದಣಿಯಾಗಿರಬೇಕು. ನೆರೆಯವರಿಗೆ ತೊಂದರೆಯಾಗದಂತೆ ನಿರ್ವಹಣೆ ಮಾಡಬೇಕು. ಸಿಸಿಟಿವಿ ಅಳವಡಿಕೆ, ಕಾರ್ಯನಿರ್ವಹಿಸುವ ಸಿಬ್ಬಂದಿಯ ಸಂಪೂರ್ಣ ದಾಖಲಾತಿಯನ್ನು ಪೊಲೀಸ್ ಇಲಾಖೆಗೆ ನೀಡಬೇಕು ಎಂದು ಹೇಳಿದರು.
ಹೋಂ ಸ್ಟೇ ಮಾಲೀಕರು ಹಗಲು ಮತ್ತು ರಾತ್ರಿಯ ಸಮಯಪಾಲನೆಗೆ ಆದ್ಯತೆ ನೀಡಬೇಕು. ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಸರ್ಕಾರದ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net