ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡಕ್ಕೆ ಬಹುಮಾನ

ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿತು.
ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿತು.
Published on

ಪ್ರಮುಖ ಮುಖ್ಯಾಂಶಗಳು

  • ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ಕ್ರೀಡಾಹಬ್ಬ
  • ಹಗ್ಗ ಜಗ್ಗಾಟ ಸ್ಪರ್ಧೆ
ನಾಪೋಕ್ಲು: ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದೆ.
ಅರೆಭಾಷೆ ಗೌಡ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಹತ್ತು ಕುಟುಂಬ ಹದಿನೆಂಟು ಗೋತ್ರದ ಅರೆಭಾಷೆಗೌಡ ಜನಾಂಗ ಬಾಂಧವರಿಗಾಗಿ ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ಕ್ರೀಡಾ ಹಬ್ಬವನ್ನು ಆಯೋಜಿಸಲಾಗಿತ್ತು.
ಈ ಕ್ರೀಡಾಕೂಟದಲ್ಲಿ ಗೌಡ ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ಭಾಗವಹಿಸಿ ಪ್ರಥಮ ಬಹುಮಾನವನ್ನು ಮುಡಿಗೇರಿಸಿಕೊಂಡು ಆಕರ್ಷಕ ಟ್ರೋಫಿಯೊಂದಿಗೆ ಹದಿನೈದು ಸಾವಿರ ರೂಪಾಯಿ ನಗದು ಬಹುಮಾನವನ್ನು ಪಡೆದುಕೊಂಡು ಸಂಭ್ರಮಿಸಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net