ಮನೆ ಮನೆಗೆ ಭೇಟಿ ಸಂದರ್ಭದಲ್ಲಿ ಫಲಾನುಭವಿಗಳು ಆಧಾರ್ ಕಾರ್ಡ್ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ ಪಾನ್ ಕಾರ್ಡ್, ರೇಷನ್ ಕಾರ್ಡ್, ಪಡಿತರ ಚೀಟಿ ಮತ್ತಿತರ ದಾಖಲೆಗಳನ್ನು ನೀಡಿ ಗೃಹಜ್ಯೋತಿ ಯೋಜನೆ ಪರಿಷ್ಕರಣಾ ಕಾರ್ಯಕ್ಕೆ ಕೈಜೋಡಿಸುವ ಕಾರ್ಯ ನಡೆದಿದೆ. ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆ ಪಡೆದಿರುವ ೧,೪೭,೮೧೨ ಕುಟುಂಬಗಳಲ್ಲಿ ೩೧,೨೫೫ ಕುಟುಂಬಗಳ ಸರ್ವೆ ಕಾರ್ಯ ನಡೆದಿದ್ದು, ಶೇ.೨೧.೧೫ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಸೆಸ್ಕ್ ಇಇ ರಾಮಚಂದ್ರ ಮಾಹಿತಿ ನೀಡಿದ್ದಾರೆ.