ಅಮೆರಿಕದ ಸಾಮ್ರಾಜ್ಯಶಾಹಿ ಧೋರಣೆ ವಿರುದ್ಧ ಪ್ರತಿಭಟನೆ

ಅಮೆರಿಕದ ಸಾಮ್ರಾಜ್ಯಶಾಹಿ ಧೋರಣೆ ವಿರುದ್ಧ ನೆಲ್ಯಹುದಿಕೇರಿ ಸಿಪಿಐಎಂ ಶಾಖೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಮೆರಿಕದ ಸಾಮ್ರಾಜ್ಯಶಾಹಿ ಧೋರಣೆ ವಿರುದ್ಧ ನೆಲ್ಯಹುದಿಕೇರಿ ಸಿಪಿಐಎಂ ಶಾಖೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published on
ಸಿದ್ದಾಪುರ: ವೆನೆಜುವೆಲಾ ಅಧ್ಯಕ್ಷ ಮಡುರೊ ಹಾಗೂ ಅವರ ಪತ್ನಿಯನ್ನು ಕಿಡ್ನಾೃಪ್ ಮಾಡಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿ, ಅಮೆರಿಕದ ಸಾಮ್ರಾಜ್ಯಶಾಹಿ ಧೋರಣೆ ವಿರುದ್ಧ ನೆಲ್ಯಹುದಿಕೇರಿ ಸಿಪಿಐಎಂ ಶಾಖೆಯಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾ ಸಿಪಿಐಎಂ ಕಾರ್ಯದರ್ಶಿ ಎಚ್.ಬಿ.ರಮೇಶ್ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಹತ್ತಿಕ್ಕುವ ಅಮೆರಿಕದ ಸಾಮ್ರಾಜ್ಯಶಾಹಿ ನೀತಿಗಳನ್ನು ಖಂಡಿಸಿದರು. ಸ್ವತಂತ್ರ ರಾಷ್ಟ್ರಗಳ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುವ ಪ್ರವೃತ್ತಿ ಅಪಾಯಕಾರಿ ಎಂದು ಹೇಳಿದರು.
ನೆಲ್ಯಹುದಿಕೇರಿ ಶಾಖಾ ಕಾರ್ಯದರ್ಶಿ ಪಿ.ಆರ್.ಭರತ್, ಟಿ.ಟಿ.ಉದಯಕುಮಾರ್, ಶೌಖತ್ ಅಲಿ, ಚಂದ್ರ, ಯೂಸಫ್, ನಾರಾಯಣ, ಶಂಸುದ್ದೀನ್, ಶಿವರಾಮ, ಎಂ.ಜಿ. ಜೋಸ್, ರವಿ, ಪಕ್ಷದ ಕಾರ್ಯಕರ್ತರು ಇದ್ದರು.
ಚಿತ್ರ 8ಎಸ್ ಡಿ ಪಿ 01:-
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net