ಪ್ರತಿಭಟನೆ ಸಂದರ್ಭ ಬಿಗಿ ಪೊಲೀಸ್ ಬಂದೋಬಸ್ಥ್ ಕಲ್ಪಿಸಲಾಗಿತ್ತು. ಡಿಸಿಎಫ್ ಜಗನ್ನಾಥ್ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಇದ್ದರು. ರೈತ ಸಂಘದ ಸಂಚಾಲಕ ಪುಚ್ಚಿಮಾಡ ಸುಭಾಶ್, ಕಾರ್ಮಿಕ ಮುಖಂಡ ಭರತ್, ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸುನಿಲ್ ಮಾದಪ್ಪ, ಮರ್ಚೆಂಟ್ ಬ್ಯಾಂಕ್ ಅಧ್ಯಕ್ಷ ಕಿರಿಯಮಾಡ ಅರುಣ್ ಪೂಣಚ್ಚ, ರೈತ ಸಂಘದ ಪೊನ್ನಂಪೇಟೆ ತಾಲೂಕು ಸಂಚಾಲಕ ಮಂಜು ಹಾಗೂ ಕೃಷಿಕರು, ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.