ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಜು. 27ರಂದು ಪ್ರಕಟಿಸಿರುವ ಹೊಸ ಕರಡು ಅಧಿಸೂಚನೆಯಲ್ಲಿ ಕೊಡಗು ಜಿಲ್ಲೆಯ 55 ಗ್ರಾಮಗಳನ್ನು ಪರಿಸರ ಸೂಕ್ಷö್ಮವಲಯದ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಇವುಗಳಲ್ಲಿ ಕೊಳಗದಾಳು ಗ್ರಾಮವೂ ಸೇರಿದೆ. ಈ ಗ್ರಾಮದಲ್ಲಿ ಶತಮಾನಗಳಿಂದ ರೈತರು, ಕೃಷಿ ಕಾರ್ಮಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರು ವಾಸಿಸುತ್ತಿದ್ದು, ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ಶಾಲೆ, ಅಂಗನವಾಡಿ, ವಸತಿ ಪ್ರದೇಶ, ಸಾರ್ವಜನಿಕ ಸಮುದಾಯ ಭವನ, ರಸ್ತೆಗಳು, ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾಗೂ ನೈಸರ್ಗಿಕ ನೀರಿನ ಟ್ಯಾಂಕ್‌ಗಳಿವೆ.