ನಿವೇಶನಕ್ಕೆ ಒತ್ತಾಯಿಸಿ ಮುಂದುವರಿದ ಧರಣಿ

ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಗ್ರಾಮ ಪಂಚಾಯಿತಿಯ ಕುಂಬೂರು ಗ್ರಾಮದ ಸ.ನಂ.125/1 ಪೈಸಾರಿ ಜಾಗದಲ್ಲಿ ನಿವೇಶನಕ್ಕಾಗಿ ಕಾರ್ಮಿಕರು ಡಾ.ಅಂಬೇಡ್ಕರ್ ಭಾವಚಿತ್ರವನ್ನು ಇಟ್ಟುಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಗ್ರಾಮ ಪಂಚಾಯಿತಿಯ ಕುಂಬೂರು ಗ್ರಾಮದ ಸ.ನಂ.125/1 ಪೈಸಾರಿ ಜಾಗದಲ್ಲಿ ನಿವೇಶನಕ್ಕಾಗಿ ಕಾರ್ಮಿಕರು ಡಾ.ಅಂಬೇಡ್ಕರ್ ಭಾವಚಿತ್ರವನ್ನು ಇಟ್ಟುಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
Published on
ಸೋಮವಾರಪೇಟೆ: ನಿವೇಶನರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಬುಧವಾರವೂ ನಡೆಯಿತು.
ಮಂಗಳವಾರ ರಾತ್ರಿ ಸುರಿದ ಮಳೆಯಿಂದ ಧರಣಿ ನಿರತರು ಸಂಕಷ್ಟಕ್ಕೆ ಸಿಲುಕಿದರು. ಮಲಗುವ ಜಾಗಕ್ಕೆ ಮಳೆನೀರು ನುಗ್ಗಿದ ಪರಿಣಾಮ ಚಳಿಯಲ್ಲಿ ನಡುಗುವಂತಾಯಿತು. 6ನೇ ದಿನವೂ ಯಾವುದೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಲಿಲ್ಲ. 
 ಬಡ ಕಾರ್ಮಿಕರ ಹೋರಾಟ ಹತ್ತಿಕ್ಕುವ ತಂತ್ರದ ಬಗ್ಗೆ ಸಂಶಯವಿದೆ. ಇದೆಲ್ಲಾ ವಿಷಯವನ್ನು ತಿಳಿದುಕೊಂಡು ಸಿದ್ಧತೆ ಮಾಡಿಕೊಂಡೆ, ಅಹೋರಾತ್ರಿ ಧರಣಿಗೆ ಇಳಿದಿದ್ದೇವೆ. ಬಲಪ್ರಯೋಗ ಮಾಡಿದರೆ, ಶಾಸಕರ ಮನೆ ಮುಂದೆ ಧರಣಿ ಪ್ರಾರಂಭಿಸಲಾಗುವುದು ಎಂದು ಕಾರ್ಮಿಕ ಸಂಘಟನೆಯ ಅಧ್ಯಕ್ಷ ಕೆ.ಮೊಣ್ಣಪ್ಪ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net