ಈ ಸಂದರ್ಭ ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಮಾತನಾಡಿ, ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿಶೇಷವಾಗಿ ಕಾವೇರಿ ನದಿ ಹರಿಯುವ ಪ್ರದೇಶಗಳಲ್ಲಿ ಘನ ತ್ಯಾಜ್ಯ, ಪ್ಲಾಸ್ಟಿಕ್ ವಸ್ತುಗಳು, ಹೋಟೆಲ್ ಹಾಗೂ ವ್ಯಾಪಾರಿಕ ತ್ಯಾಜ್ಯ, ನದಿಗೆ ಹಾಗೂ ನದಿ ತೀರ ಪ್ರದೇಶಗಳಿಗೆ ಅಕ್ರಮವಾಗಿ ಎಸೆಯಲಾಗುತ್ತಿರುವುದು ಅತ್ಯಂತ ವಿಷಾದಕರ ವಿಷಯವಾಗಿದೆ. ಇದು ಪರಿಸರ, ಸಾರ್ವಜನಿಕ ಆರೋಗ್ಯ ಮತ್ತು ಭವಿಷ್ಯದ ನೀರಿನ ಭದ್ರತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿ ನಾವು ಈಗಾಗಲೇ ಒಮ್ಮೆ ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಮನವಿ ಸಲ್ಲಿಸಿದ್ದೇವೆ. ಆದರೆ ದುರದೃಷ್ಟವಶಾತ್, ಇಂದಿನವರೆಗೆ ಯಾವುದೇ ಪರಿಣಾಮಕಾರಿ ಹಾಗೂ ದೃಢವಾದ ಕ್ರಮ ಕೈಗೊಳ್ಳಲಾಗಿಲ್ಲ. ಅದರ ಹಿನ್ನೆಲೆ ಇಂದು ಮತ್ತೊಮ್ಮೆ ಪ್ರತಿಭಟಿಸಲಾಗುತ್ತಿದೆ ಎಂದು ತಿಳಿಸಿದರು.