ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

 ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಕೊಡಗು ಜಿಲ್ಲಾ ಘಟಕ ಇಂದು ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಕೊಡಗು ಜಿಲ್ಲಾ ಘಟಕ ಇಂದು ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.
Published on

ಪ್ರಮುಖ ಮುಖ್ಯಾಂಶಗಳು

  • ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಮಡಿಕೇರಿ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಕೊಡಗು ಜಿಲ್ಲಾ ಘಟಕ ಇಂದು ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.

ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಗ್ರಾ.ಪಂ ನೌಕರರು ಕಳೆದ ೭-೮ ವರ್ಷಗಳಿಂದ ವೇತನ ಪರಿಷ್ಕರಣೆಯಾಗದೆ ಇರುವುದರಿಂದ ಇಂದಿನ ಬೆಲೆ ಏರಿಕೆ ದಿನಗಳಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ಈಗ ನೀಡುತ್ತಿರುವ ವೇತನ ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಾಕಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪಿ.ಆರ್.ಭರತ್ ಮಾತನಾಡಿ, ಸರ್ಕಾರ ದುಡಿಯುವ ವರ್ಗಕ್ಕೆ ಸಹಾಯ ಮಾಡಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ಮೇ ೨೨, ೨೦೨೬ ರಂದು ಹೊರಡಿಸಿರುವ ಆದೇಶದನ್ವಯ ವೇತನ ಬಿಡುಗಡೆ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತಾಗಾರರಾಗಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಮಹಿಳಾ ವಾಹನ ಚಾಲಕಿಯರು ಹಾಗೂ ಕಸಗುಡಿಸುವ ಮಹಿಳೆಯರು ಸುಮಾರು ೧-೨ ವರ್ಷದಿಂದ ವೇತನವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಈ ನೌಕರರನ್ನು ಸರಕಾರ ಸಂಜೀವಿನಿ ಒಕ್ಕೂಟದಿಂದ ಬೇರ್ಪಡಿಸಿ ಪಂಚಾಯಿತಿ ಮೂಲಕ ವೇತನ ನೀಡಬೇಕೆಂದು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ವಿಜಯ್, ದಿನೇಶ್, ಸತೀಶ್ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net