ಮತ್ತೂರು ಗ್ರಾಮದ ಮುಂಡತಕೊಲ್ಲಿ ಪೈಸಾರಿಯ ಸರ್ವೆ ನಂ.೭೪/೧ರ ಸುಮಾರು ೩ ಎಕರೆ ೨೦ ಸೆಂಟ್ ಸರ್ಕಾರಿ ಜಾಗದಲ್ಲಿ ೨೫ಕ್ಕೂ ಅಧಿಕ ಕುಟುಂಬಗಳು ಕಳೆದ ೩೦೪೦ ವರ್ಷಗಳಿಂದ ವಾಸಿಸುತ್ತಿದ್ದು, ಮನೆ, ಕುಡಿಯುವ ನೀರು, ವಿದ್ಯುತ್, ಶೌಚಾಲಯ ಹಾಗೂ ರಸ್ತೆ ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರದ ಆದೇಶದಂತೆ ಭೂ ಮಾಪನ ಇಲಾಖೆಯ ಅಧಿಕಾರಿಗಳೊಂದಿಗೆ ಸರ್ವೆ ಮಾಡಲು ಮುಂದಾದಾಗ ಸ್ಥಳೀಯರಿಂದ ವಿರೋಧ ವ್ಯಕ್ತವಾಯಿತು.