ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಳಾದ ಡಾ.ಗಣೇಶ್ ಪ್ರಸಾದ್ ಮಾತನಾಡಿ, ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ವರದಿಗಾಗಿ ೧೧೭ ಅಂಶಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮಾನವ ಅಭಿವೃದ್ಧಿ ವರದಿ ಆಧಾರದ ಮೇಲೆ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಅನುದಾನ ಹಂಚಿಕೆಯಾಗುತ್ತದೆ. ಶಿಶು ಮತ್ತು ತಾಯಂದಿರ ಮರಣ, ಶಾಲೆ ಬಿಟ್ಟ ಮಕ್ಕಳ ಸಂಖ್ಯೆಗಳನ್ನು ನಿಖರವಾಗಿ ದಾಖಲಿಸಬೇಕು ಎಂದರು.