ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲಿ

ನೆಲ್ಯಹುದಿಕೇರಿ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಕರವೇ (ಸ್ವಾಭಿಮಾನಿ ಬಳಗ) ವತಿಯಿಂದ ಪಿಡಿಒಗೆ ಮನವಿ ಸಲ್ಲಿಸಿತು. ಸುರೇಶ್ ನೆಲ್ಲಿಕಲ್, ಸಜಿಲ್ ಕುಮಾರ್, ಹರೀಶ್, ಉಪಾಧ್ಯಕ್ಷ ರಶಾದ್, ಕಾರ್ಯದರ್ಶಿ ನಂದ ಇತರರು ಇದ್ದರು.

Published on
ಸಿದ್ದಾಪುರ: ನೆಲ್ಯಹುದಿಕೇರಿ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಳಗ)ದಿಂದ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಕರವೇ ಜಿಲ್ಲಾ ಕಾರ್ಯದರ್ಶಿ ಸುರೇಶ್ ನೆಲ್ಲಿಕಲ್ ಮಾತನಾಡಿ, ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಬೆಟ್ಟದ ಕಾಡು ರಸ್ತೆಯ ಮೂಲಕ ಕಾವೇರಿ ನದಿಗೆ ಹೊಂದಿಕೊಂಡ ಪ್ರದೇಶದಲ್ಲಿ ಯಂತ್ರಗಳನ್ನು ಬಳಸಿ ಜಲಜೀವನ ಮಿಷನ್ ಯೋಜನೆಯ ಕಾಮಗಾರಿ ಆರಂಭಿಸಲಾಗಿತ್ತು. ಆದರೆ ಯೋಜನೆ ಪೂರ್ಣಗೊಂಡು ಮೂರು ವರ್ಷಗಳು ಕಳೆದರೂ ಸಾರ್ವಜನಿಕರಿಗೆ ಪ್ರಯೋಜನವಾಗಿಲ್ಲ. ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಯೋಜನೆ ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಕರವೇ ಸ್ವಾಭಿಮಾನಿ ಬಳಗದ ಜಿಲ್ಲಾ ಸಲಹೆಗಾರ ಸಜಿಲ್ ಕುಮಾರ್, ನೆಲ್ಯಹುದಿಕೇರಿ ಘಟಕದ ಅಧ್ಯಕ್ಷ ಹರೀಶ್, ಉಪಾಧ್ಯಕ್ಷ ರಶಾದ್, ಕಾರ್ಯದರ್ಶಿ ನಂದ ಹಾಗೂ ಪದಾಧಿಕಾರಿಗಳಾದ ರೆಜಿ, ಅಪ್ಪು, ಸಫಿಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net