ಮಾಲಂಬಿ ಬೆಟ್ಟದಲ್ಲಿ ಮಳೆಗಾಗಿ ಪೂಜೆ

ಮಾಲಂಬಿ ದೇವರುಗಳ ವಾರ್ಷಿಕ ಪೂಜಾ ಮಹೋತ್ಸವ ಪ್ರಯುಕ್ತ ಮಳೆ ಮಲ್ಲೇಶ್ವರ ಬೆಟ್ಟದ ಮೇಲಿರುವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಾಲಂಬಿ ದೇವರುಗಳ ವಾರ್ಷಿಕ ಪೂಜಾ ಮಹೋತ್ಸವ ಪ್ರಯುಕ್ತ ಮಳೆ ಮಲ್ಲೇಶ್ವರ ಬೆಟ್ಟದ ಮೇಲಿರುವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ವಾರ್ಷಿಕ ಪೂಜಾ ಮಹೋತ್ಸವ
ಶನಿವಾರಸಂತೆ: ಸಮೀಪದ ಮಾಲಂಬಿ ಗ್ರಾಮದ ದೇವರುಗಳ ಸಮಿತಿ ವತಿಯಿಂದ ಶ್ರೀ ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಬಸವಣ್ಣ ಮತ್ತು ಶ್ರೀ ಕನ್ನಂಬಾಡಿ ಅಮ್ಮನವರ ದೇವರ ವಾರ್ಷಿಕ ಪೂಜಾ ಮಹೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು. 
ದೇವರ ಪೂಜಾ ಮಹೋತ್ಸವ ಮತ್ತು ವಾರ್ಷಿಕ ಪೂಜೆ ಅಂಗವಾಗಿ ಸೋಮವಾರ ಬೆಳಗ್ಗೆ ದೇವಸ್ಥಾನ ಸಮಿತಿ, ಗ್ರಾಮಸ್ಥರು, ಭಕ್ತರು ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ವಾದ್ಯಗೋಷ್ಠಿಯೊಂದಿಗೆ ಮಾಲಂಬಿ ಶ್ರೀ ಮಳೆ ಮಲ್ಲೇಶ್ವರ ಬೆಟ್ಟವನ್ನೇರಿದರು. ನಂತರ ಬೆಟ್ಟದ ಮೇಲಿರುವ ಶ್ರೀ ಮಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದ ಅರ್ಚಕರು ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ಮತ್ತು ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಕ್ತರಿಗೆ ತೀರ್ಥ, ಪ್ರಸಾದ ವಿನಿಯೋಗ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net