ಜಿಲ್ಲೆಯಲ್ಲಿ ೦ ತಿಂಗಳಿನಿಂದ ೫ ವರ್ಷದ ಒಳಗಿನ ಒಟ್ಟು ೩೨,೭೦೨ ಮಕ್ಕಳಿದ್ದು, ನಗರ ವ್ಯಾಪ್ತಿಯಲ್ಲಿ ೩,೨೭೫ ಗ್ರಾಮೀಣ ವ್ಯಾಪ್ತಿಯಲ್ಲಿ ೨೯,೪೨೭ ಮಕ್ಕಳಿರುತ್ತಾರೆ. ಇವರಲ್ಲಿ ಸ್ಥಿರವಾಸಿತ ವಲಸೆ ಒಟ್ಟು ೧೫,೭೮೮ ಮಕ್ಕಳು, ವಲಸೆ ಕಾರ್ಮಿಕರ ೪,೧೧೨ ಮಕ್ಕಳು ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು ೪೭೦ ಬೂತ್, ೩೨ ಸಂಚಾರಿ ಬೂತ್, ಒಂದು ಸಂಚಾರಿ ಬೂತ್‌ನ್ನು ಮಾಡಲಾಗಿದೆ. ಬೂತ್‌ಗಳಲ್ಲಿ ಲಸಿಕೆ ನೀಡಲು ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡವನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೧,೩೬,೨೧೪ ಮನೆ ಗುರುತಿಸಲಾಗಿದೆ. ಈ ಮನೆಗಳಿಗೆ ಭೇಟಿ ನೀಡಿ ಬಿಟ್ಟು ಹೋಗಿರುವ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.