25ರಂದು ಪುರಂ ಅಯ್ಯಪ್ಪಸ್ವಾಮಿ ಮುಖಮಂಟಪ ಉದ್ಘಾಟನೆ

ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಆವರಣದಲ್ಲಿ ಮುಖ ಮಂಟಪ.
ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಆವರಣದಲ್ಲಿ ಮುಖ ಮಂಟಪ.
Published on

ಪ್ರಮುಖ ಮುಖ್ಯಾಂಶಗಳು

  • ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಎಂ. ಸುರೇಶ್ ಮಾಹಿತಿ
ಸುಂಟಿಕೊಪ್ಪ : ಸುಂಟಿಕೊಪ್ಪ ಶ್ರೀ ಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮುಖಮಂಟಪವನ್ನು (ತೀರ್ಥ) ಡಿ.25ರಂದು ಲೋಕಾರ್ಪಣೆಗೊಳಿಸಲಾಗುವುದು ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಎಂ.ಸುರೇಶ್ ತಿಳಿಸಿದರು.
ಶ್ರೀ ಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರವು 1992ರಲ್ಲಿ ಸ್ಥಾಪನೆಗೊಂಡ ನಂತರದ ದಿನಗಳಲ್ಲಿ ದೇವಾಲಯದ ಆವರಣದಲ್ಲಿ ಶ್ರೀ ಅಯ್ಯಪ್ಪಸ್ವಾಮಿ, ಶ್ರೀ ಕನ್ನಿಮೂಲ ಗಣಪತಿ ಹಾಗೂ ನೈವೇದ್ಯ ಕೊಠಡಿ ಮತ್ತು ದೇವಸ್ಥಾನದ ಕಚೇರಿ ನಿರ್ಮಿಸಲಾಗಿತ್ತು. ಅದರಂತೆ ಕಳೆದ ವರ್ಷ ದುರ್ಗಾ ದೇವಿಯ ದೇವಸ್ಥಾನವನ್ನು ಬಿ.ಎಂ.ಸುರೇಶ್ ನೇತೃತ್ವದ ದೇವಸ್ಥಾನ ಆಡಳಿತ ಮಂಡಳಿ ತಂಡವು ಜೀರ್ಣೊದ್ಧಾರಗೊಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ ಎಂದು ವಿಜಯವಾಣಿಗೆ ತಿಳಿಸಿದ್ದಾರೆ.
ಈ ಬಾರೀ ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ತೀರ್ಥ ಮಂಟಪದ ಅವಶ್ಯಕತೆಯನ್ನು ಮನಗಂಡ ಬಿ.ಎಂ.ಸುರೇಶ್ ಆಡಳಿತ ಮಂಡಳಿ ನಿರ್ಮಿಸುವ ಕಾರ್ಯಕ್ಕೆ ಮುಂದಾಗಿ ಊರಿನ ದಾನಿಗಳು, ಭಕ್ತರು ಸೇರಿದಂತೆ ಸುತ್ತಮುತ್ತಲಿನ ದಾನಿಗಳ ಸಹಾಯದಿಂದ 15 ರಿಂದ 18 ಲಕ್ಷ ರೂ. ವೆಚ್ಚದಲ್ಲಿ ಮುಖಮಂಟಪ ನಿರ್ಮಾಣ ಮಾಡಲಾಯಿತು.
ಡಿ.24 ರಂದು ಸಂಜೆ 6 ಗಂಟೆಗೆ ಕೇರಳದ ತಳಿಪರಂಬ ಕಾಳೇಘಾಟ್ ಇಲ್ಲಂ ಮಧುಸೂಧನ್ ತಂತ್ರಿ ಅವರ ನೇತೃತ್ವದಲ್ಲಿ ಆಚಾರ್ಯ ತಂತ್ರಿಯವರನ್ನು ಸ್ವೀಕಾರ ಮಾಡುವುದರೊಂದಿಗೆ 6.30ಕ್ಕೆ ಪ್ರಾಶಬ್ಧ ಶುದ್ಧಿ, ರಾತ್ರಿ 7 ಗಂಟೆಗೆ ರಾಕ್ಷೋಘ್ನ ಹೋಮ, ಮುಖ ಮಂಟಪ ಸರ್ಮಪಣೆ, ರಾತ್ರಿ 8. ಗಂಟೆಗೆ ವಾಸ್ತು ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಬಲಿ, ವಾಸ್ತು ಕಲಶಾಭಿಷೇಕ, ಅತ್ತಾಯ ಪೂಜೆ, ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಲಿದೆ.
ಡಿ.25 ರಂದು ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ, 8 ಗಂಟೆಗೆ ಕಳಸಪೂಜೆ, 10 ಗಂಟೆಗೆ ದುರ್ಗಾಲಕ್ಷ್ಮೀ ಕಲಶಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಪೂಜೆ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ. ದುರ್ಗಾ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಅಂಗವಾಗಿ ವೈಧ್ಧಿಕ ಧಾರ್ಮಿಕ, ವಿಧಿ ವಿಧಾನ ಕಾರ್ಯಕ್ರಮಗಳು ನಡೆಯಲಿದೆ.
ಡಿ.27 ರಂದು ಮಂಡಲಪೂಜೆಯ ಅಂಗವಾಗಿ ಬೆಳಗ್ಗೆ 6.45 ಕ್ಕೆ ಗಣಪತಿ ಹೋಮ, 7.10ಕ್ಕೆ ಕನ್ನಿಮೂಲ ಗಣಪತಿಗೆ ಎಳನೀರು ಅಭಿಷೇಕ, 7.30ಕ್ಕೆ ಚಂಡೆಮೇಳ, 9ಕ್ಕೆ ಶ್ರೀ ಅಯ್ಯಪ್ಪಸ್ವಾಮಿಗೆ ಪಂಚಾಮೃತಾಭಿಷೇಕ, 11.30ಕ್ಕೆ ಅಯ್ಯಪ್ಪ ಸ್ವಾಮಿಗೆ ಲಕ್ಷಾರ್ಚನೆ, 12.30 ಕ್ಕೆ ಅಯ್ಯಪ್ಪಸ್ವಾಮಿಗೆ ಪಲ್ಲಪೂಜೆ, 1ಗಂಟೆಗೆ ಮಹಾಪೂಜೆ ಮತ್ತು ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದೆ. ದಿನದ ವಿಶೇಷ ಪೂಜೆಯಾಗಿ ಬಿಲ್ವಪತ್ರೆ, ತುಳಸಿ ಆರ್ಚನೆ, ಪಂಚಾಮೃತ ಅಭಿಷೇಕ ಹಾಗೂ ದುರ್ವಾಚನೆ ನಡೆಸಲಾಗುವುದು. ಶ್ರೀಪುರಂ ಅಯ್ಯಪ್ಪ ಕ್ಷೇತ್ರದಲ್ಲಿ ವಿಶೇಷವಾಗಿ ಸಂಜೆ 6.30 ಕ್ಕೆ ದೀಪಾರಾಧನೆ ಮತ್ತು ಮೆರವಣಿಗೆ 7.30 ಗಂಟೆಗೆ ದುರ್ಗಾಪೂಜೆ ನಂತರ ಮಹಾಮಂಗಳಾರತಿಯೊಂದಿಗೆ ಪ್ರಸಾದ ವಿನಿಯೋಗ ನಡೆಯಲಿದೆ.

ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ದೇವಸ್ಥಾನ ಮುಖಮಂಟಪವನ್ನು ನಿರ್ಮಿಸಲು ಹಿರಿಯರು, ದಾನಿಗಳು ಹಾಗೂ ಭಕ್ತರು ನೆರವು ಸಹಕಾರಗಳನ್ನು ನೀಡಿದ್ದರಿಂದ 6 ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಎಲ್ಲ ರೀತಿಯ ಸಹಕಾರ ನೀಡಿದ ಸರ್ವರನ್ನು ಸ್ಮರಿಸುತ್ತೇನೆ.

ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರವು ಸಾಕಷ್ಟು ಪ್ರಸಿದ್ಧಿಯನ್ನು ಪಡೆಯುತ್ತಿದ್ದು ಈ ಕ್ಷೇತ್ರದಲ್ಲಿ ಅಯ್ಯಪ್ಪ ಸ್ವಾಮಿ, ಕನ್ನಿಮೂಲ ಗಣಪತಿ, ದುರ್ಗಾ ಲಕ್ಷ್ಮೀ ಸನ್ನಿಧಿಗಳಿವೆ. ಮುಂದೆ ನಾಗಾಲಯ ಮಾಡುವ ಅಭಿಲಾಷೆ ಇದೆ. ಭಕ್ತರು ಧನ ಸಹಾಯ ಮಾಡಿ ನಮ್ಮೊಂದಿಗೆ ಕೈ ಜೋಡಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net