ವಿದ್ಯುತ್ ಸಮಸ್ಯೆಗೆ ಶೀಘ್ರ ಶಾಶ್ವತ ಪರಿಹಾರ

ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರೂರು ಭೂತನಕಾಡು ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು. ವಿ.ಪಿ.ಶಶಿಧರ್, ಬಾಲಕೃಷ್ಣ ರೈ, ಸಂಜು ಪೊನ್ನಪ್ಪ, ದೇವಿಪ್ರಸಾದ್ ಕಾಯರ್ಮಾರ್, ವೆಂಕಪ್ಪ ಶಿವು, ಸೋಮಣ್ಣ, ಸಂತೋಷ ಪೂವಯ್ಯ, ಕೊರವಂಡ ನರೇನ್ ಇತರರು ಇದ್ದರು.
ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರೂರು ಭೂತನಕಾಡು ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು. ವಿ.ಪಿ.ಶಶಿಧರ್, ಬಾಲಕೃಷ್ಣ ರೈ, ಸಂಜು ಪೊನ್ನಪ್ಪ, ದೇವಿಪ್ರಸಾದ್ ಕಾಯರ್ಮಾರ್, ವೆಂಕಪ್ಪ ಶಿವು, ಸೋಮಣ್ಣ, ಸಂತೋಷ ಪೂವಯ್ಯ, ಕೊರವಂಡ ನರೇನ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಮಂತರ್ ಗೌಡ ಭರವಸೆ
  • ಹೊರೂರು ಭೂತನಕಾಡು ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
ಸುಂಟಿಕೊಪ್ಪ: ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಬಲಪಡಿಸುವುದು ಮೊದಲ ಆದ್ಯತೆಯಾಗಿದೆ. ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಎಲ್ಲ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು.
ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರೂರು ಗ್ರಾಮದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಹೊರೂರು ಭೂತನಕಾಡು ರಸ್ತೆ ಅಭಿವೃದ್ಧಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಕಾಡುಪ್ರಾಣಿಗಳ ಉಪಟಳ ಹಾಗೂ ವಿದ್ಯುತ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರಕ್ಕಿಂತ ಹೆಚ್ಚಾಗಿ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಕೆದಕಲ್ ಗ್ರಾಮದ ಕಾಫಿ ಬೆಳೆಗಾರರು ಹಾಗೂ ಗ್ರಾಮಸ್ಥರು ಹತ್ತಾರು ಸಮಸ್ಯೆಗಳ ಸರಮಾಲೆಯನ್ನೇ ಶಾಸಕರ ಮುಂದಿಟ್ಟರು. ಕಾಡಾನೆ ಹಾಗೂ ಕಾಡೆಮ್ಮೆಗಳ ನಿರಂತರ ದಾಳಿಯಿಂದಾಗಿ ತೋಟ-ಗದ್ದೆಗಳು ನಾಶವಾಗುತ್ತಿದ್ದು, ರೈತರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಸಕಾಲದಲ್ಲಿ ಮಳೆಯಾಗದೆ ಕೃಷಿಕರು ಸಂಪೂರ್ಣವಾಗಿ ಕಂಗೆಟ್ಟಿದ್ದಾರೆ. ಮಳೆಗಾಲದ ಸಮಯದಲ್ಲಿ ತೀವ್ರ ವಿದ್ಯುತ್ ಸಮಸ್ಯೆ ಎದುರಾಗುತ್ತಿದ್ದು, ಇಡೀ ಗ್ರಾಮಸ್ಥರು ಕತ್ತಲಲ್ಲಿ ಕಳೆಯುವಂತಾಗಿದೆ ಎಂದು ಅಳಲು ತೋಡಿಕೊಂಡರು.
ರೈತರು ಮತ್ತು ಸಾರ್ವಜನಿಕರ ಸಮಸ್ಯೆಗಳು ಗಮನಕ್ಕೆ ಬಂದಿದೆ. ಕಾಡುಪ್ರಾಣಿಗಳ ದಾಳಿ ತಡೆಗೆ ಹಾಗೂ ಮಳೆಗಾಲದ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಕಾಮಗಾರಿಗಳು ವಿಳಂಬವಾಗದಂತೆ ನೋಡಿಕೊಳ್ಳಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕಾಫಿ ಬೆಳೆಗಾರರಾದ ಬಾಲಕೃಷ್ಣ ರೈ, ಸಂಜು ಪೊನ್ನಪ್ಪ, ದೇವಿಪ್ರಸಾದ್ ಕಾಯರ್ಮಾರ್, ವೆಂಕಪ್ಪ ಶಿವು, ಸೋಮಣ್ಣ, ಸಂತೋಷ ಪೂವಯ್ಯ, ಕೊರವಂಡ ನರೇನ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net